Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 9 ದಿನಗಳ ಅಧಿವೇಶನದಲ್ಲಿ 41 ಗಂಟೆ 20 ನಿಮಿಷಗಳ ಕಾಲ ಕಲಾಪ ನಡೆದಿದೆ. ಶಾಸಕರ ಒಟ್ಟು ಹಾಜರಾತಿ ಶೇ.75ರಷ್ಟಿದ್ದು, ಇದು ತೃಪ್ತಿ ತಂದಿಲ್ಲ. ದಿನೇಶ್ ಗುಂಡೂರಾವ್, ಹರೀಶ್ ಪೂಂಜ, ಕೃಷ್ಣಪ್ಪ, ಜಮೀರ್ ಅಹ್ಮದ್ ಹಾಗೂ ಅನಿತಾ ಕುಮಾರಸ್ವಾಮಿ ಸಹಿತ 9 ಶಾಸಕರು ಅನುಮತಿ ಪಡೆಯದೆ ಸದನಕ್ಕೆ ಗೈರಾಗಿದ್ದರು ಎಂದರು.
Related Articles
2021-22ನೇ ಸಾಲಿನ ವಿಧಾನಮಂಡಲದ ವಿವಿಧ ಜಂಟಿ ಸಮಿತಿಗಳು ಮತ್ತು ವಿಧಾನಸಭೆಯ ವಿವಿಧ ಸಮಿತಿಗಳನ್ನು ಪುನರ್‌ರಚನೆ ಮಾಡಲು ಸದನವು ಸಭಾಧ್ಯಕ್ಷರಿಗೆ ಅಧಿಕಾರ ನೀಡಿದೆ. ಒಂದು ಹಕ್ಕುಚ್ಯುತಿ ಪ್ರಸ್ತಾವವನ್ನು ಸದನದಲ್ಲಿ ಮಂಡಿಸಿದ್ದು, ಈ ಬಗ್ಗೆ ಚರ್ಚಿಸಿ ತಿರಸ್ಕರಿಸಲಾಗಿದೆ. ಸದನದಲ್ಲಿ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 2022-23ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತು ಹಾಗೂ 2022-23ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿ ಮಂಡಿಸಿದ್ದು, ಡಿ.29ರಂದು ಮತಕ್ಕೆ ಹಾಕಿ ಅಂಗೀಕರಿಸಲಾಗಿದೆ. 2021ನೇ ಸಾಲಿನ ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ಮಸೂದೆಯನ್ನು ಹಿಂಪಡೆಯಲಾಗಿದೆ ಎಂದರು.
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಎಂ.ಬಿ.ಬೋರಲಿಂಗಯ್ಯ, ಜಿಪಂ ಸಿಇಒ ದರ್ಶನ್ ಉಪಸ್ಥಿತರಿದ್ದರು.
Advertisement