Advertisement
ಗೃಹ ಸಚಿವ ಡಾ| ಪರಮೇಶ್ವರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಡಾ| ಎಚ್.ಸಿ. ಮಹದೇವಪ್ಪ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿದ್ದಾರೆ. ಇತ್ತೀಚೆಗೆ ಪಕ್ಷಕ್ಕೆ ಸೇರಿದ ಸುಧಾಮ್ ದಾಸ್ ಅವರ ಹೆಸರನ್ನು ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಹೊರಟಿರುವ ಬಗ್ಗೆ ಈ ನಾಲ್ವರು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದು, ಪರೋಕ್ಷವಾಗಿ ಉಪ ಮು ಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ನಡೆಯನ್ನು ಪ್ರಶ್ನಿಸಿದಂತಾಗಿದೆ.
Related Articles
ಈ ಬೆಳವಣಿಗೆಗೆ ಸಂಬಂಧಿಸಿ ಸುದ್ದಿಗಾರರ ಜತೆಗೆ ಮಾತನಾಡಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ, ಹೈಕಮಾಂಡ್‌ಗೆ ಪತ್ರ ಬರೆದಿರುವುದು ನಿಜ. ಸುಧಾಮ್ ದಾಸ್ ಮೂರು ತಿಂಗಳು ಹಿಂದಿನವರೆಗೆ ಸರಕಾರಿ ಅಧಿಕಾರಿಯಾಗಿದ್ದರು. ಅವರು ಈಗಷ್ಟೇ ಪಕ್ಷಕ್ಕೆ ಬಂದಿದ್ದಾರೆ. ಇನ್ನೊಂದಿಷ್ಟು ದಿನಗಳ ಕಾಲ ಅವರು ಪಕ್ಷಕ್ಕೆ ಸೇವೆ ಮಾಡಲಿ ಎಂದು ಅಭಿಪ್ರಾಯಪಟ್ಟರು. 30 ವರ್ಷಗಳಿಂದ ಪಕ್ಷಕ್ಕಾಗಿ ಕೆಲಸ ಮಾಡಿದ ದಲಿತ ನಾಯಕರಿಗೆ ಅವಕಾಶ ಸಿಗಲಿ ಎಂಬುದಷ್ಟೇ ನಮ್ಮ ಸಲಹೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಕಾರವೇ ನಾವು ಪತ್ರ ಬರೆದಿದ್ದೇವೆ. ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತದೆ ಎಂದರು. ಈ ಮೂಲಕ ನೀವು ಡಿ.ಕೆ. ಶಿವಕುಮಾರ್ ನಿಲುವನ್ನು ವಿರೋಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.
Advertisement
ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಪ್ರತಿಕ್ರಿಯಿಸಿ, ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮದ ಮುಂದೆ ಮಾತನಾಡಲು ಇಷ್ಟಪಡುವುದಿಲ್ಲ. ಪತ್ರ ಬರೆದಿರುವುದು ಆಂತರಿಕ ವಿಚಾರ. ನನ್ನ ಅಭಿಪ್ರಾಯವನ್ನು ಹೈಕಮಾಂಡ್‌ಗೆ ತಿಳಿ ಸುತ್ತೇನೆ ಎಂದಿದ್ದಾರೆ.
ಡಿಕೆಶಿಗೆ ಚೆಕ್‌ವೆುಟ್?ದಲಿತ ಸಮುದಾಯದ ಸಚಿವರು ಬರೆದ ಈ ಪತ್ರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪಕ್ಷದ ಆಂತರಿಕ ವಲಯದಿಂದ ಕೊಟ್ಟ ಚೆಕ್‌ವೆುಟ್ ಎಂಬ ಚರ್ಚೆ ಈಗ ಕಾಂಗ್ರೆಸ್ ವಲಯದಲ್ಲಿ ಪ್ರಾರಂಭವಾಗಿದೆ. ಸುಧಾಮ್ ದಾಸ್ ಬಗ್ಗೆ ಮಾತ್ರ ಅಸಮಾಧಾನ ವ್ಯಕ್ತವಾಗಿರುವುದರಿಂದ ಇದು ಶಿವಕುಮಾರ್ ವಿರುದ್ಧ ಮಾತ್ರ ಪ್ರಯೋಗವಾದ ಅಸ್ತ್ರ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಇನ್ನೊಂದೆಡೆ ತಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂದು ಮುಸ್ಲಿಂ ನಾಯಕರೂ ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.