Advertisement

MGNREGA: ನರೇಗಾ ಬಗ್ಗೆ ಕೈ, ಬಿಜೆಪಿ ಸಮರ

12:49 AM Oct 07, 2023 | Team Udayavani |

ಹೊಸದಿಲ್ಲಿ: “ಪ್ರಧಾನಿ ನರೇಂದ್ರ ಮೋದಿ ಮನರೇಗಾ ಅನುದಾನ ಕಡಿತಗೊಳಿಸಿದ್ದಾರೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಜನರು ಕೆಲಸಕ್ಕಾಗಿ ಅಲೆದಾಡುತ್ತಿದ್ದಾರೆ. ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕಾಂಗ್ರೆಸ್‌ ಅನ್ನು ಟೀಕಿಸುವ ಮೂಲಕ ಪ್ರಧಾನಿ ಮೋದಿ ಅವರು ವೈಫ‌ಲ್ಯಗಳನ್ನು ಮರೆಮಾಚುತ್ತಿದ್ದಾರೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

Advertisement

ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್‌ ಮಾಳವೀಯ, “ಮನರೇಗಾ ಬಜೆಟ್‌ ಕಡಿತದ ಕುರಿತು ಸುಳ್ಳು ಆರೋಪಗಳನ್ನು ಮಾಡುವಲ್ಲಿ ಖರ್ಗೆ ನಿರತರಾಗಿದ್ದಾರೆ. “2021-22ರ ಹಣಕಾಸು ವರ್ಷದಲ್ಲಿ ಮನರೇಗಾ ಯೋಜನೆಗೆ ಬಜೆಟ್‌ನಲ್ಲಿ 73,000 ಕೋಟಿ ರೂ. ಮೀಸಲಿರಿಸಲಾಗಿತ್ತು. ಆದರೆ ಅನಂತರ ಅದನ್ನು 98,000 ಕೋಟಿ ರೂ.ಗಳಿಗೆ ಪರಿಷ್ಕರಿಸಲಾಯಿತು. ಅದೇ ರೀತಿ 2020-21ರ ಹಣಕಾಸು ವರ್ಷದಲ್ಲಿ ಯೋಜನೆಗೆ 61,500 ಕೋಟಿ ರೂ. ಮೀಸಲಿರಿಸಲಾಗಿತ್ತು. ಆದರೆ ಅನಂತರ ಪರಿ ಷ್ಕರಿಸಿ, ಅದನ್ನು 1,11,500 ಕೋಟಿ ರೂ.ಗಳಿಗೆ ಹೆಚ್ಚಿಸಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next