Advertisement

Kaiva: ಕೈವ ಟ್ರೇಲರ್‌ಗೆ ದರ್ಶನ್‌ ಸಾಥ್‌

02:18 PM Nov 26, 2023 | Team Udayavani |

ಧನ್ವೀರ್‌ ನಾಯಕರಾಗಿರುವ “ಕೈವ’ ಚಿತ್ರ ಡಿಸೆಂಬರ್‌ 8ರಂದು ತೆರೆಕಾಣುತ್ತಿದೆ. ಈಗ ಚಿತ್ರದ ಟ್ರೇಲರ್‌ ಬಿಡುಗಡೆಗೆ ಚಿತ್ರತಂಡ ತಯಾರಿ ನಡೆಸಿದೆ.

Advertisement

ನ.27ರಂದು ಸಂಜೆ 6.30ಕ್ಕೆ ರಾಜಾಜಿನಗರದ ಮೈದಾನದಲ್ಲಿ ಚಿತ್ರದ ಟ್ರೇಲರ್‌ ಬಿಡುಗಡೆಯಾಗಲಿದ್ದು, ನಟ ದರ್ಶನ್‌ ಅತಿಥಿಯಾಗಿ ಆಗಮಿಸಲಿದ್ದಾರೆ. ಈ ಮೂಲಕ ನವನಟ ಧನ್ವೀರ್‌ಗೆ ಸಾಥ್‌ ನೀಡುತ್ತಿದ್ದಾರೆ.

ಇನ್ನು ಕೈವ ಬಗ್ಗೆ ಹೇಳುವುದಾದರೆ, ಕೈವ ಇದು ಒಬ್ಬ ವ್ಯಕ್ತಿಯ ಹೆಸರು.1983 ರಲ್ಲಿ ಬೆಂಗಳೂರಿನ ತಿಗಳರಪೇಟೆಯಲ್ಲಿ ನಡೆದ ನೈಜ ಘಟನೆ ಆಧರಿಸಿದ ಚಿತ್ರ. ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆಯೇ ಚಿತ್ರದ ಪ್ರಮುಖ ಕಥಾವಸ್ತು.

“ನನಗೆ ಶವಾಗಾರದಲ್ಲಿ ಕೆಲಸ ಮಾಡುವವರಿಂದ ಈ ಕಥೆ ಸಿಕ್ಕಿತು. ಆನಂತರ ತಿಗಳರಪೇಟೆಗೆ ಹೋಗಿ ಅಲ್ಲಿ ಈ ಘಟನೆ ಬಗ್ಗೆ ಕೂಲಂಕುಶವಾಗಿ ತಿಳಿದುಕೊಂಡೆ. ಈ ಘಟನೆ ಕಂಡಿದ್ದ ಅನೇಕರು ಈಗಲೂ ಇದ್ದಾರೆ. ಅದೇ ಇಸವಿಯಲ್ಲಿ ನಡೆದ ಗಂಗಾರಾಮ್‌ ಕಟ್ಟಡದ ದುರಂತಕ್ಕೆ ಹಾಗೂ ಈ ಚಿತ್ರದ ಕಥೆಗೂ ಸಂಬಂಧವಿದೆ. ದಿನಕರ್‌ ತೂಗುದೀಪ್‌ ಪ್ರಮು ಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಿನಕರ್‌ ತೂಗುದೀಪ, ರಾಘು ಶಿವಮೊಗ್ಗ ಸೇರಿದಂತೆ ಐದು ಜನ ನಿರ್ದೇಶಕರು ಈ ಚಿತ್ರದಲ್ಲಿ ನಟಿಸಿದ್ದಾರೆ’ ಎನ್ನುವುದು ನಿರ್ದೇಶಕ ಜಯತೀರ್ಥ ಮಾತು.

ಅಭುವನಸ ಕ್ರಿಯೇಶನ್ಸ್‌ ಬ್ಯಾನರ್‌ನಡಿ ರವೀಂದ್ರ ಕುಮಾರ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜನೆ, ಡಾ. ವಿ. ನಾಗೇಂದ್ರ ಪ್ರಸಾದ್‌ ಸಾಹಿತ್ಯ ಹಾಡುಗಳಿಗಿದೆ. ಕೆ.ಎಂ.ಪ್ರಕಾಶ್‌ ಸಂಕಲನ, ರಘು ನಿಡುವಳ್ಳಿ ಸಂಭಾಷಣೆಗೆ ಇದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next