Advertisement
10 ವರ್ಷಗಳ ಅನಂತರ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಅಭಿವೃದ್ಧಿಗೆ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದ 17,439 ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾನಿಸಲಾಗಿದೆ.
Related Articles
Advertisement
ಕಲ್ಯಾಣ ಕರ್ನಾಟಕ ಭಾಗದಲ್ಲಿ 45 ಪ್ರಾಥಮಿಕ ಆರೋಗ್ಯ ಕೇಂದ್ರ, 31 ಸಮು ದಾಯ ಆರೋಗ್ಯ ಕೇಂದ್ರ ಪ್ರಾರಂಭ; 9 ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರಿಸಲು ಹಾಗೂ 2 ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಲಾಗಿದ್ದು, ಇದಕ್ಕಾಗಿ 890 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದರು.
ಭೀಮಾ ನದಿಗೆ ಹರವಾಳ-ಬೆಳಗುಂಪಾ ನಡುವೆ 130 ಕೋಟಿ ರೂ. ವೆಚ್ಚದಲ್ಲಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣಕ್ಕೂ ಸಂಪುಟ ಅನುಮೋದನೆ ನೀಡಿದೆ.
ಅನುದಾನಕ್ಕಾಗಿ ಕೇಂದ್ರಕ್ಕೆ ಮನವಿಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತೀ ವರ್ಷ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಆದರೆ 371ಜೆ ವಿಧಿ ಜಾರಿ ಬಳಿಕ ಕೇಂದ್ರ ಸರಕಾರ ಈ ಭಾಗಕ್ಕೆ ಒಂದು ರೂಪಾಯಿ ಅನುದಾನವನ್ನೂ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆದ್ದರಿಂದ ಈ ಭಾಗದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ನೀಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಇದೇ ವೇಳೆ ಹೇಳಿದರು. ಮಿನಿ ವಿಧಾನ ಸೌಧಗಳು ಇನ್ನು ಪ್ರಜಾಸೌಧ
ರಾಜ್ಯಾದ್ಯಂತ 43 “ಭಾರತ ರತ್ನ ಡಾ| ಬಿ.ಆರ್. ಅಂಬೇಡ್ಕರ್ ಕಾರ್ಮಿಕ ಸೇವಾ ಕೇಂದ್ರ’ಗಳನ್ನು 48 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಸಚಿವ ಸಂಪುಟ ನಿರ್ಧರಿಸಿದೆ. ಅಲ್ಲದೆ ಮಿನಿ ವಿಧಾನಸೌಧಗಳಿಗೆ ಇನ್ನು “ಪ್ರಜಾಸೌಧ’ ಎಂದು ನಾಮಕರಣ ಮಾಡಲು ಸಂಪುಟ ಸಭೆ ತೀರ್ಮಾನಿಸಿದೆ. ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ 85.60 ಕೋಟಿ ರೂ. ವೆಚ್ಚದಲ್ಲಿ ಎಂಆರ್‌ಐ ಯಂತ್ರಗಳ ಖರೀದಿ, ಬೆಂಗಳೂರಿನ ಹೆಬ್ಟಾಳ ಬಳಿ ರಾಜ್ಯ ಬೀಜ ನಿಗಮದ ಜಮೀನಿನಲ್ಲಿ ಕೃಷಿ ಇಲಾಖೆ ಜಂಟಿ ಸಹಭಾಗಿತ್ವದಲ್ಲಿ 56.63 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಪಾನೀಯ ನಿಗಮದ ಕಚೇರಿ ಕಟ್ಟಡವನ್ನು ನಿರ್ಮಿಸಲು ಅನು ಮೋದನೆ ನೀಡಲಾಗಿದೆ. ಪ್ರಮುಖ ನಿರ್ಣಯಗಳು
-ರಾಜ್ಯದ 15 ವಕ್ಫ್ ಸಂಸ್ಥೆಗಳಡಿ ಮಹಿಳಾ ಪ.ಪೂ. ಕಾಲೇಜು ಪ್ರಾರಂಭಿಸಲು 447.76 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ
– ಗದಗ ಜಿಲ್ಲೆಯ ರೋಣದಲ್ಲಿ 50 ಕೋಟಿ ರೂ. ನಬಾರ್ಡ್ ಅನುದಾನದಡಿ ಜಿಟಿಟಿಸಿ ಕೇಂದ್ರ ಸ್ಥಾಪನೆ
-ರಾಜ್ಯ ಬೀಜ ನಿಗಮ ನಿಯಮಿತಕ್ಕೆ 200 ಕೋಟಿ ರೂ. ಬ್ಯಾಂಕ್ ಸಾಲಕ್ಕೆ ಖಾತರಿ
-ಗದಗ, ಕೊಪ್ಪಳ, ಚಾಮರಾಜನಗರದ ಆಸ್ಪತ್ರೆಗಳಿಗೆ 149 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಸೌಲಭ್ಯ ಕಲ್ಯಾಣ ಕರ್ನಾಟಕದ ಸಮಗ್ರ ವಿಕಾಸ ನಮ್ಮ ಸರಕಾರದ ಬದ್ಧತೆಯಾಗಿದೆ. ಅದಕ್ಕಾಗಿಯೇ ಪ್ರತೀ ವರ್ಷ 5 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟು ರಸ್ತೆ, ನೀರಾವರಿ, ಆರೋಗ್ಯ, ಶಿಕ್ಷಣದ ವಿಕಾಸಕ್ಕೆ ಶ್ರಮಿಸಲಾಗುತ್ತಿದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ ಕಲ್ಯಾಣ ಕರ್ನಾಟಕ ಭಾಗದ ಈ ಭಾಗದ ಎಲ್ಲ ಸ್ಮಾರಕಗಳನ್ನು ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸಿ ಅವುಗಳ ರಕ್ಷಣೆ ಜತೆಗೆ ಸಚಿವ ಎಚ್.ಕೆ. ಪಾಟೀಲ್ ಬೇಡಿಕೆ ಇಟ್ಟಿದ್ದರು. ಅದಕ್ಕೆ ಒಪ್ಪಿಗೆ ನೀಡುವ ಮೂಲಕ ಸರಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ.
-ಡಿ.ಕೆ. ಶಿವಕುಮಾರ್, ಡಿಸಿಎಂ