Advertisement

22ರಂದು ವಿಮಾನ ನಿಲ್ದಾಣ ಲೋಕಾರ್ಪಣೆ

11:06 AM Nov 14, 2019 | Naveen |

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣ ನ.22 ರಂದು ಲೋಕಾರ್ಪಣೆ ಆಗಲಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್‌ ತಿಳಿಸಿದ್ದಾರೆ.

Advertisement

ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧುವಾರ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಭಾರತೀಯ ನಿಲ್ದಾಣ ಪ್ರಾ ಧಿಕಾರ ನ. 22 ರಂದು ಉದ್ಘಾಟನಾ ಕಾರ್ಯಕ್ರಮದ ವೇದಿಕೆ ಸೇರಿದಂತೆ ಕಾರ್ಯಕ್ರಮದ ನಿರ್ವಹಣೆ ಮಾಡಲಿದೆ. ಗಣ್ಯರಿಗೆ ಶಿಷ್ಟಾಚಾರ ಹಾಗೂ ವಿಮಾನ ನಿಲ್ದಾಣದ ಭದ್ರತೆಯನ್ನು ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಒದಗಿಸಲಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಯಶಸ್ಸಿನ ನಿಟ್ಟಿನಲ್ಲಿ ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸಹಕಾರ ನೀಡಬೇಕೆಂದು ಅವರು ಸೂಚಿಸಿದರು. ವಿಮಾನ ನಿಲ್ದಾಣದಲ್ಲಿ ನೀರು ಪೂರೈಕೆ, ವಿದ್ಯುತ್‌, ರಸ್ತೆ, ಮುಂತಾದ ಮೂಲಭೂತ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಯಾವುದೇ ಬಾಕಿ ಕೆಲಸಗಳು ಇದ್ದಲ್ಲಿ ತುರ್ತಾಗಿ ಮುಗಿಸಬೇಕು ಎಂದು ಸೂಚಿಸಿದರು. ತೋಟಗಾರಿಕೆ ಮತ್ತು ಅರಣ್ಯ ಇಲಾಖೆಗಳು ಜಂಟಿಯಾಗಿ ವಿಮಾನ ನಿಲ್ದಾಣದಲ್ಲಿ ಅಗತ್ಯವಿರುವ ಕಡೆ ಹಸರೀಕರಣಗೊಳಿಸಲು ಗಿಡಗಳನ್ನು ನೆಡಲು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

Advertisement

ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರರಾವ್‌ ಮಾತನಾಡಿ, ವಿಮಾನ ನಿಲ್ದಾಣ ಪ್ರಾ ಧಿಕಾರ ಶಾಶ್ವತ ಭದ್ರತಾ ಸಿಬ್ಬಂದಿ ನೇಮಕ ಮಾಡಿಕೊಳ್ಳುವವರೆಗೆ ಅಗತ್ಯ ಭದ್ರತಾ ಸಿಬ್ಬಂದಿ ನಿಯೋಜಿಸುವಂತೆ ಕೋರಿದರು. ಈಗ ಪ್ರಸಕ್ತ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ಹಾಗೂ ಪೊಲೀಸರು ಸೇರಿ 60 ಸಿಬ್ಬಂದಿ ಇದ್ದು, ಇದನ್ನು 87 ಕ್ಕೆ ಹೆಚ್ಚಿಸುವಂತೆ ಸಭೆ ಗಮನಕ್ಕೆ ತಂದರು.

ವಿಮಾನ ನಿಲ್ದಾಣ ಹಾರಾಟ ನಡೆಸುವಾಗ ರನ್‌ವೇ ಕೊನೆ ಭಾಗದಲ್ಲಿ ಸುರಕ್ಷತೆ ದೃಷ್ಟಿಯಿಂದ 150 ಅಡಿ ಚೌಕಾಕಾರದಲ್ಲಿ ಮರಳು ಅಥವಾ ಸಡಿಲ ಮಣ್ಣು ಹರಡಬೇಕಾಗಿದೆ ಎಂದು ಸಭೆ ಗಮನಕ್ಕೆ ತಂದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ. ರಾಜಾ, ಕಲಬುರಗಿ ಪೊಲೀಸ್‌ ಆಯುಕ್ತಾಲಯದ ಡಿಸಿಪಿ ಕಿಶೋರಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಶಂಕರಪ್ಪ ವಣಿಕ್ಯಾಳ, ಹೆಚ್ಚುವರಿಪೊಲೀಸ್‌ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ, ಐಎಎಸ್‌ ಪ್ರೊಬೇಷನರಿ ಅಧಿಕಾರಿ ಡಾ| ಬಿ. ಗೋಪಾಲಕೃಷ್ಣ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಅಮೀನ್‌ ಮುಖ್ತಾರ, ಶಿಷ್ಟಾಚಾರ ತಹಶೀಲ್ದಾರ್‌ ಪ್ರಕಾಶ ಚಿಂಚೋಳೀಕರ ಹಾಗೂ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next