Advertisement

ಭೀಮಾ ನದಿ ಪಾತ್ರದಡಿ ಎಚ್ಚರಿಕೆ ವಹಿಸಲು ಸೂಚನೆ

11:39 AM Jul 05, 2020 | Naveen |

ಕಲಬುರಗಿ: ಮಹಾರಾಷ್ಟ್ರದಲ್ಲಿ ಮತ್ತು ಭೀಮಾ ನದಿ ಜಲಾನಯನ ಪ್ರದೇಶದಲ್ಲಿ ಮಳೆ ನಿರಂತರವಾಗಿ ಬರುತ್ತಿರುವುದರಿಂದ ಭೀಮಾ ನದಿಯ ಸೊನ್ನ ಬ್ಯಾರೇಜ್‌ ನ ಗೇಟುಗಳನ್ನು ಎತ್ತಿ ಯಾವುದೇ ಸಂದರ್ಭದಲ್ಲಿ ನೀರು ಬಿಡುವ ಸಾಧ್ಯತೆ ಇರುವುದರಿಂದ ನದಿ ಕೆಳಗಿನ ಜನರು ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಅದೇ ರೀತಿ ನದಿ ಪಾತ್ರದಲ್ಲಿ ಬರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳನ್ನು ಸುಸ್ಥಿತಿಯಲ್ಲಿಡಲು ಸುರಕ್ಷತೆ ದೃಷ್ಟಿಯಿಂದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಅಫ‌ಜಲಪುರ ತಾಲೂಕಿನ ಅಳ್ಳಗಿ ಬಿ ಹಾಗೂ ಬಳ್ಳುಂಡಗಿ ಏತ ನೀರಾವರಿ ಮುಖ್ಯ ಮತ್ತು ಉಪ ಕಾಲುವೆಗಳಿಗೂ ನೀರು ಹರಿಸಲಾಗುತ್ತಿದ್ದು, ರೈತರು ನೀರಿನ ಸದುಪಯೋಗಪಡೆದುಕೊಳ್ಳಬೇಕೆಂದು ಕರ್ನಾಟಕ ನೀರಾವರಿ ನಿಗಮದ ನೀರಾವರಿ ಯೋಜನೆ ನಿರ್ಮಾಣ ಕಲಬುರಗಿ ವೃತ್ತದ ಅಧೀಕ್ಷಕ ಅಭಿಯಂತರಾದ ಜಗನ್ನಾಥ ಹಲಿಂಗೆ ಅವರು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next