ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಸುರಿದ ಭಾರೀ ಮಳೆ ಮತ್ತು ಭೀಮಾ ನದಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ಅಧ್ಯಯನಕ್ಕೆ ಇಂದು ಕೇಂದ್ರ ಅಧ್ಯಯನ ತಂಡ ಪ್ರವಾಸ ಕೈಗೊಂಡಿದೆ.
ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ (ಎನ್.ಡಿ.ಎಂ.ಎ) ರಮೇಶ್ ಕುಮಾರ್ ಘಂಟಾ ನೇತೃತ್ವದ ದ್ವಿಸದಸ್ಯ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ವಿಭಾಗದ ನಿರ್ದೇಶಕ ಡಾ. ಭರ್ತೇಂದು ಕುಮಾರ್ ಸಿಂಗ್ ಇದ್ದು, ಜೊತೆಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ ರಾಜನ್ ಸಹ ಇದ್ದಾರೆ.
ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡುವ ಮುನ್ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧ್ಯಯನ ತಂಡದ ಅಧಿಕಾರಿಗಳು ಸಭೆ ನಡೆಸಿ ಜಿಲ್ಲಾಡಳಿತದ ಅಧಿಕಾರಿಗಳಿಂದ ನೆರೆ ಹಾನಿ ಬಗ್ಗೆ ಮಾಹಿತಿ ಪಡೆದರು.
ಕಲಬುರಗಿ ತಾಲೂಕಿನ ಕಪನೂರ ಮತ್ತು ಫರಹತಾಬಾದ್, ಅಫಜಲಪುರ ತಾಲೂಕಿನ ಬಿದನೂರ, ಗೊಬ್ಬರ (ಬಿ), ಚಿಣಮಗೇರಾ, ಆಳ್ಳಗಿ (ಬಿ), ತೆಲ್ಲೂರ ಹಾಗೂ ಜೇವರ್ಗಿ ತಾಲೂಕಿನ ಕೋನ ಹಿಪ್ಪರಗಾ ಸೇತುವೆ ಪ್ರದೇಶಕ್ಕೆ ಕೇಂದ್ರ ಅಧ್ಯಯನ ತಂಡದವರು ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ: ಬಾಗಲಕೋಟೆಯಿಂದ ಉಡುಪಿಗೆ ಬಂದು ಬದುಕು ಕಟ್ಟಿಕೊಂಡ ಬಸವರಾಜ್ | Udayavani