Advertisement

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

12:43 PM Dec 22, 2024 | Team Udayavani |

ಕಲಬುರಗಿ: ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಿ ಎನ್ನುವ ಬೇಡಿಕೆ ರೈತರಿಂದ ಬಂದಿದ್ದು, ತೊಗರಿ ಬೆಳೆ ಹಾನಿಯ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ. ಈ ವರದಿ ಬಂದ ಬಳಿಕ ಆ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಜಯದೇವ ಹೃದ್ರೋಗ ಆಸ್ಪತ್ರೆ ಕಟ್ಟಡ ಉದ್ಘಾಟನೆಗೆ ಆಗಮಿಸಿದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ವರ್ಷವೂ ತೊಗರಿ ನೆಟೆರೋಗರಿಂದ ಹಾನಿಯಾದಗಲೂ ವಿಶೇಷ ಪ್ಯಾಕೇಜ್ ಮೂಲಕ ಪರಿಹಾರ ನೀಡಲಾಗಿದೆ ಎಂದರು.

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಪುನರುಚ್ಚರಿಸಿದರು.

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ತಮಗಿದೆ ಎಂದರು.

Advertisement

ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆ ಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371ಜೆ ಜಾರಿಯಾಗಿದೆ. ಇಲ್ಲಿ 371 ಬೆಡ್ ಗಳ ಆಸ್ಪತ್ರೆಯನ್ನು ಇಂದು ಉದ್ಘಾಟಿಸುತ್ತಿದ್ದೇವೆ ಎಂದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು, ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಇತರೆ ವಿಧಾನ ಪರಿಷತ್ ಸದಸ್ಯರು ರವಿ ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ. ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಿಎಂ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next