Advertisement

ಕಲಬುರಗಿ: ಕಾಂಗ್ರೆಸ್ ಮುಖಂಡನ ಸಹೋದರನ ಮೇಲೆ ಗುಂಡಿನ ದಾಳಿ

02:49 PM Jan 07, 2023 | Team Udayavani |

ಕಲಬುರಗಿ : ನಗರದ ಆಳಂದ ಚೆಕ್ ಪೋಸ್ಟ್ ಹತ್ತಿರದಲ್ಲಿ ಶನಿವಾರ (ಜ.7)ಮಧ್ಯಾಹ್ನ ಜೀಪಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

Advertisement

ಚೆನ್ನವೀರ ಪಾಟೀಲ್ ದಣ್ಣೂರ ಹಾಗೂ ಜೊತೆಗಿದ್ದ ಹುಡುಗನ ಮೇಲೆ ಫೈರಿಂಗ್ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡ ಚನ್ನವೀರ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಂತೋಷ ಪಾಟೀಲ್ ದಣ್ಣೂರ ಅವರ ಸಹೋದರರಾಗಿದ್ದಾರೆ.

ಬೊಲೆರೋ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಚನ್ನವಿರ ಕೈಗೆ ಗುಂಡು ಹಾರಿಸಿದ್ದು, ಇದನ್ನು ನೋಡಿದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಡಿಸಿಪಿ ಅಡ್ಡೂರು ಶ್ರೀನಿವಾಸಲು ಭೇಟಿ ಪರಿಶೀಲನೆ ನಡೆಸಿದರು . ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next