Advertisement
ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಹೊಸಳ್ಳಿ-ಹೆಚ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾಧಿಕಾರಿಗಳ ನಡೆ- ಹಳ್ಳಿ ಕಡೆ’ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೂಕಂಪನಕ್ಕೆ ಅಂಜದೆ ಧೈರ್ಯದಿಂದ ಇರಬೇಕು ಎಂದು ಗ್ರಾಮಸ್ಥರಲ್ಲಿ ಆತ್ಮಸ್ಥೈರ್ಯ ತುಂಬಿದರು.
Related Articles
Advertisement
ಪ್ರವಾಹ, ಕೋವಿಡ್ ಮುಂತಾದ ಸಂದರ್ಭದಲ್ಲಿ ಜಿಲ್ಲೆಯನ್ನು ಸುತ್ತಿದ್ದೇನೆ. ಆದರೆ, ಹೊಸಳ್ಳಿ- ಹೆಚ್ ಗ್ರಾಮದಲ್ಲಿನ ಜನರ ಪ್ರೀತಿಯಾದರಗಳನ್ನು ಎಲ್ಲಿಯೂ ಕಂಡಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು.
ಭೂಕಂಪನ ಸಂದರ್ಭದಲ್ಲಿ ಜನರಲ್ಲಿ ಭಯ-ಆತಂಕ ಮನೆ ಮಾಡಿರುತ್ತದೆ. ಆದರೆ, ನಿಮ್ಮಲ್ಲಿ ಅದೆಲ್ಲಾ ಮರೆಯಾಗಿ ಪ್ರೀತಿಯ ಭಾವ ಕಾಣುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಇದನ್ನೂ ಓದಿ:ಡಿಕೆಶಿ ವಿರುದ್ಧ ವ್ಯವಸ್ಥಿತವಾದ ಷಡ್ಯಂತ್ರ: ಪ್ರತಾಪ್ ಸಿಂಹ ಹೊಸ ಬಾಂಬ್
ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಪಿಂಚಣಿ ಸಮಸ್ಯೆ, ಪಹಣಿ, ಆಧಾರ್, ಚುನಾವಣಾ ಗುರುತಿನ ಪತ್ರ ತಿದ್ದುಪಡಿ ಮುಂತಾದ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಇದರ ಸದುಪಯೋಗ ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ದಿಲೀಷ್ ಶಶಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಶೇಕಡ 100ರಷ್ಟು ಕೋವಿಡ್ ವ್ಯಾಕ್ಸಿನ್ ಲಸಿಕೆ ಹಾಕುವ ಗುರಿಹೊಂದಲಾಗಿದೆ. ಅದ್ದರಿಂದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಗ್ರಾಮಸ್ಥರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸೇಡಂ ಉಪವಿಭಾಗದ ಸಹಾಯಕ ಅಯುಕ್ತೆ ಮೋನಾ ರೂಟ್, ಭೂ ದಾಖಲೆಗಳ ಉಪ ನಿರ್ದೇಶಕ ಶಂಕರ, ಕೃಷಿ ಇಲಾಖೆ ಉಪನಿರ್ದೇಶಕ ಸಮದ್ ಪಟೇಲ್, ತಹಶೀಲ್ದಾರ ನಾಗನಾಥ ತರಗೆ, ತಾಲೂಕ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅನೀಲ್ ರಾಠೋಡ, ಹಲಚೇರಾ ಗ್ರಾ.ಪಂ. ಅಧ್ಯಕ್ಷ ಶಿವಗಂಗಾ ಅಂಬ್ರೀಶ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶರಣಗೌಡ ಮಾಲಿಪಾಟೀಲ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೆಬೂಬ ಪಟೇಲ್ ಸೇರಿದಂತೆ ಇನ್ನಿತರ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.