Advertisement

ಲಾಕ್ ಡೌನ್ ಉಲ್ಲಂಘಿಸಿ ಜಾತ್ರೆ ಪ್ರಕರಣ: ರಾವೂರ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ

03:25 PM Apr 18, 2020 | keerthan |

ಕಲಬುರಗಿ: ಲಾಕ್ ಡೌನ್ ಉಲ್ಲಂಘಿಸಿ ಜಾತ್ರೆ ನಡೆಸಿದ ಚಿತ್ತಾಪುರ ತಾಲೂಕಿನ ರಾವೂರ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದ ಮಠಕ್ಕೆ ಶನಿವಾರ ಜಿಲ್ಲಾಧಿಕಾರಿ ಶರತ್‌ ಬಿ. ಭೇಟಿ ನೀಡಿ ಪರಿಶೀಲಿಸಿದರು.

Advertisement

ಗ್ರಾಮದ ವಿವಿಧ ಪ್ರದೇಶಗಳಿಗೂ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಲಾಕ್ ಡೌನ್ ಅನುಷ್ಠಾನವನ್ನು ಪರಾಮರ್ಶಿಸಿದರು.

ಕೋವಿಡ್-19 ಸೋಂಕು ಹರಡದಂತೆ ಮುನ್ನೆಚರಿಕೆಯಾಗಿ ಗ್ರಾಮದೊಳಗಿನ ರಸ್ತೆಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಸ್ಥಳದಲ್ಲಿದ್ದ ಚಿತ್ತಾಪುರ ತಹಶೀಲ್ದಾರ ಉಮಾಕಾಂತ ಅವರು ಡಿ.ಸಿ. ಅವರ ಗಮನಕ್ಕೆ ತಂದರು.

ರಾವೂರು ಜಾತ್ರೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ 20 ಜನ ಮತ್ತು ಸುಮಾರು 150-200 ಜನ ಗ್ರಾಮಸ್ಥರ‌ ವಿರುದ್ಧ ವಾಡಿ ಠಾಣೆಯಲ್ಲಿ ಈಗಾಗಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.

ವಾಡಿ ಪಟ್ಟಣಕ್ಕೂ ಭೇಟಿ: ವಾಡಿ ಪಟ್ಟಣದ ಎಸಿಸಿ ಕಂಪನಿ ಗೇಟ್ ಬಳಿ ಪಿಲ್ಕಂ ಪ್ರದೇಶದ 2 ವರ್ಷದ ಗಂಡು‌ ಮಗುವಿಗೆ ಕಳೆದ ಏಪ್ರಿಲ್‌ 12 ರಂದು ಕೋವಿಡ್-19 ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕಂಟೇನ್ ಮೆಂಟ್ ಝೋನ್ ಎಂದು ಗುರುತಿಸಿದ ವಾರ್ಡ ಸಂಖ್ಯೆ 11, 12, 13 ಹಾಗೂ 14 ಪ್ರದೇಶಕ್ಕೂ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಧಿಕಾರಿ ವೀಕ್ಷಿಸಿದರು.

Advertisement

ಜಿಪಂ ಸಿ‌ಇಓ ಡಾ.ಪಿ‌.ರಾಜಾ, ಚಿತ್ತಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅನಿತಾ ಕೆ., ಚಿತಾಪುರ ಸಿಪಿಐ ಪಂಚಾಕ್ಷರಿ ಸಾಲಿಮಠ, ವಾಡಿ ಪುರಸಭೆ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next