Advertisement

ಕಲಬುರಗಿ: ರೌಡಿ ಶೀಟರ್ ರಮೇಶ ಕಾಳೆ ಗಡಿಪಾರು

02:31 PM May 24, 2022 | Team Udayavani |

ಕಲಬುರಗಿ: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ರೌಡಿಶೀಟರ್ ರಮೇಶ ವಿಜಯಕುಮಾರ ಕಾಳೆ (53 ವ) ನನ್ನು ಒಂದು ವರ್ಷದ ಅವಧಿಗೆ ಕೊಡಗು ಜಿಲ್ಲೆಯ ಭಾಗಮಂಡಲ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

Advertisement

ಈತ ಕಳೆದ ಹಲವಾರು ವರ್ಷಗಳಿಂದ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ನಗರದ ಹಲವು ಪೊಲೀಸ್ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆದರೂ ಆತ ತನ್ನ ಅಕ್ರಮವನ್ನು ಮುಂದುವರಿಸಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಗಡಿಪಾರು ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ. ವೈ.ಎಸ್.ರವಿಕುಮಾರ ಹಾಗೂ ಡಿಸಿಪಿ ಅಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ಇದನ್ನೂ ಓದಿ:ಆಫ್ರಿಕಾ: ಮಹಿಳೆಯನ್ನು ಕೊಂದ ಟಗರು, ಮೂರು ವರ್ಷ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ಬ್ರಹ್ಮಪುರ ಪೊಲೀಸ್ ಠಾಣೆಯ ನಿವಾಸಿಯಾದ ಈತ ಜಾಮೀನು ಪಡೆದುಕೊಂಡು ಹೊರ ಬಂದ ಬಳಿಕ ಗಾಂಜಾ ಮಾರಾಟವನ್ನು ಕೈ ಬಿಟ್ಟಿರಲಿಲ್ಲ. ಅಲ್ಲದೆ, ಗಾಂಜಾ ಮಾರಾಟದಿಂದ ಯುವಕರು, ವಿದ್ಯಾರ್ಥಿಗಳನ್ನು ಮಾದಕ ವ್ಯಸನಿಗಳನ್ನಾಗಿ ಮಾಡುವಲ್ಲಿ ಪ್ರಮುಖ ಎನ್ನಿಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next