Advertisement
ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಸಭೆಯು ಸಹ ಅಧ್ಯಕ್ಷರಾದ ಕಲಬುರಗಿ ಸಂಸದ ಡಾ. ಉಮೇಶ ಜಾಧವ್ ಅಧ್ಯಕ್ಷತೆಯಲ್ಲಿ ನಡೆಯಿತು.
Related Articles
Advertisement
ಕಾಂಗ್ರೆಸ್ ಪಕ್ಷದ ವಿಧಾನಸಭಾ ಸದಸ್ಯರು ಸಭೆಯಿಂದ ದೂರ ಉಳಿದರು. ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ತಿಪ್ಪಣ್ಣಪ್ಪ ಕಮಕನೂರ ಮಾತ್ರ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಗೆ ಹಲವು ಜಿಲ್ಲಾ ಮಟ್ಟದ ಅಧಿಕಾರಿಗಳು ಬಂದಿಲ್ಲವೆಂದು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಕಾಟಾಚಾರಕ್ಕೆ ಸಭೆ ನಡೆಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕುಸಿದಿದೆ. ಜಿಲ್ಲಾಡಳಿತ ವಿಫಲವಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.
ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, ಅಂಬೇಡ್ಕರ್ ಪುತ್ಥಳಿ ಅವಮಾನ ನಂತರ ಪ್ರತಿಭಟನೆ ವೇಳೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಗೀಡಾದ ಸಂಬಂಧ ಪ್ರಕರಣ ದಾಖಲಾಗಿದೆಯೇ ಎಂದು ಪ್ರಶ್ನಿಸಿದರಲ್ಲದೇ ತಮ್ಮ ಕ್ಷೇತ್ರದಲ್ಲಿ ರಾತ್ರಿ ಸಾರ್ವಜನಿಕ ಸಭೆಗೆ ಹೋದರೆ ಪಿಎಸ್ಐ ಕರೆದರೂ ಬರುವುದಿಲ್ಲ. ಆದರೆ ಮಾಜಿ ಶಾಸಕ ಕರೆಯದಿದ್ದರೂ ಆ ಕಾರ್ಯಕ್ರಮಕ್ಕೆ ಹತ್ತು ನಿಮಿಷ ಮೊದಲೇ ಹೋಗಿ ನಿಲ್ತಾರೆ. ಇದೇನಾ ಶಿಷ್ಟಾಚಾರ? ನಮ್ಮ ಮಾತು ಪಿಡಿಓ ಕೇಳುತ್ತಿಲ್ಲ. ಒಟ್ಟಾರೆ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.