Advertisement

Kalaburagi; ನಾಯಿ ಕಡಿತ ಸಮಸ್ಯೆ: ಮೇಯರ್, ಶಾಸಕರು, ಆಯುಕ್ತರನ್ನು ಬಾಗಿಲಲ್ಲೇ ತಡೆದ ಸದಸ್ಯರು

06:04 PM Dec 30, 2023 | Team Udayavani |

ಕಲಬುರಗಿ: ಮಹಾನಗರದಲ್ಲಿ ಇತ್ತೀಚೆಗೆ ವ್ಯಾಪಕವಾಗಿ ನಾಯಿ ಕಡಿತದಿಂದ ಗಾಯಗೊಂಡವರಿಗೆ ಸೂಕ್ತ ಪರಿಹಾರ ನೀಡುವವರೆಗೂ ಸಭೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪಾಲಿಕೆ ಸದಸ್ಯರೇ ಮೇಯರ್, ಶಾಸಕರು ಹಾಗೂ ಆಯುಕ್ತರನ್ನು ತಡೆದು ಪ್ರತಿಭಟಿಸಿದ ಘಟನೆ ನಡೆಯಿತು.

Advertisement

ಹಲವು ತಿಂಗಳ ನಂತರ ಮಹಾಪೌರ ವಿಶಾಲ ದರ್ಗಿ ಅಧ್ಯಕ್ಷತೆಯಲ್ಲಿ ಪಾಲಿಕೆ ಸಾಮಾನ್ಯ ಸಭೆ ಕರೆಯಲಾಗಿದ್ದು, ಬೆಳಿಗ್ಗೆ ನಿಗದಿಯಾದ ಸಭೆಗೆ ಆಯುಕ್ತರು, ಶಾಸಕರು, ಆಯುಕ್ತರು, ಉಪಮಹಾಪೌರರು ಸಭೆಯಲ್ಲಿ ಪಾಲ್ಗೊಳ್ಳಲು ಸಭಾಂಗಣಕ್ಕೆ ಆಗಮಿಸಿದರು. ಆದರೆ ಪಾಲಿಕೆ ಸದಸ್ಯರು, ಸಭಾಂಗಣದ ಬಾಗಿಲಲ್ಲೇ ತಡೆದು, ನಾಯಿ ಕಡಿತಕ್ಕೆ ಪರಿಹಾರ ನೀಡುವವರೆಗೂ ಸಭೆ ನಡೆಸಲು ಅವಕಾಶ ನೀಡೋದಿಲ್ಲ ಎಂದು ಪ್ರತಿಭಟಿಸಿದರು.

ಸಭೆಯಲ್ಲಿ ಚರ್ಚಿಸೋಣ- ನಿರ್ಧಾರ ಕೈಗೊಳ್ಳೊಣ ಎಂದು ಮೇಯರ್ ವಿಶಾಲ ದರ್ಗಿ, ಶಾಸಕ ಅಲ್ಲಮಪ್ರಭು ಪಾಟೀಲ್, ಆಯುಕ್ತರ ಭುವನೇಶ ಪಾಟೀಲ್ ಹೇಳಿದರು. ವಾದ – ವಿವಾದ ನಡೆದ ನಂತರ ಸಭೆಗೆ ಅವಕಾಶ ನೀಡಲಾಯಿತು.

ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ನಗರದಲ್ಲಿ ಬುಧವಾರ ನಾಯಿ ಕಡಿತಕ್ಕೆ ಒಳಗಾದ ಬಾಲಕಿ, ಗಂಭೀರವಾಗಿ ಗಾಯಗೊಂಡಿದ್ದು, ಐಸಿಯು ವಾರ್ಡ್ ನಲ್ಲಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದು, ಹತ್ತು ಲಕ್ಷ ರೂ ಪರಿಹಾರ ನೀಡಬೇಕೆಂದು ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಒತ್ತಾಯಿಸಿದರು.

ನಾಯಿ ಕಡಿತ ಹಾವಳಿ ಕಳೆದ 6 ತಿಂಗಳಿಂದ ಅವ್ಯಾಹತವಾಗಿ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪಾಲಿಕೆ ಆರೋಗ್ಯ ಹಾಗೂ ಪರಿಸರ ಅಧಿಕಾರಿಗಳು ಅವರನ್ನು ಅಮಾನತ್ತುಗೊಳಿಸಬೇಕೆಂದು ಆಗ್ರಹಿಸಿದರು.

Advertisement

ಶಾಸಕ ಅಲ್ಲಮಪ್ರಭು ಪಾಟೀಲ್ ಮಾತನಾಡಿ, ಮುಂದಿನ ದಿನಗಳಲ್ಲಿ ನಾಯಿ ಕಡಿತ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ನಿಟ್ಟಿನಲ್ಲಿ ಸಹಾಯ ಮಾಡುವುದಾಗಿ ನಗರಾಭಿವೃದ್ಧಿ ಸಚಿವರು ಹೇಳಿದ್ದಾರೆಂದು ಸಭೆ ಗಮನಕ್ಕೆ ತಂದರು.

ಸಭೆಯಲ್ಲಿ ಆರೋಗ್ಯ ವಿಭಾಗದ ಹಾಗೂ ಪರಿಸರ ವಿಭಾಗದ ಅಧಿಕಾರಿಗಳನ್ನು ಅಮಾನತ್ತುಗೊಳಿಸಬೇಕೆಂದು ಸದಸ್ಯರೆಲ್ಲರೂ ಪಕ್ಷ ಬೇಧ ಮರೆತು ಒತ್ತಾಯಿಸಿದರು.

ಅಮಾನತು: ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದ ನಂತರ ಪಾಲಿಕೆ ಆರೋಗ್ಯಾಧಿಕಾರಿ ಡಾ. ವಿವೇಕಾನಂದ ಅವರನ್ನು ಸಭೆಯಲ್ಲಿ ಅಮಾನತ್ತು ನಿರ್ಧಾರ ಪ್ರಕಟಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next