ಕಲಬುರಗಿ: ಚರಂಡಿ ಸ್ವಚ್ಚತಾ ಕಾರ್ಯ ಮಾಡುವ ಸಂದರ್ಭದಲ್ಲಿ ಇಬ್ಬರು ಮೃತಪಟ್ಟು, ಓರ್ವ ಅಸ್ವಸ್ಥಗೊಂಡಿರುವ ದುರ್ಘಟನೆ ನಗರದಲ್ಲಿ ನಡೆದಿದೆ.
ಒಳಚರಂಡಿ ಸ್ವಚ್ಚ ಮಾಡಲು ಕೆಳಗಿದ ಕಾರ್ಮಿಕರು ಒಮ್ಮೇಲೆ ಚರಂಡಿ ನೀರು ಹರಿದು ಬಂದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಹ್ಮದ (25) ರಸೀದ(30) ಎನ್ನುವರು ಸಾವನ್ನಪ್ಪಿದ್ದಾರೆ ಎಂದು ಗುರುತಿಸಲಾಗಿದೆ.
ಘಟನೆ ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಲಬುರಗಿ ಜಿಲ್ಲಾ ಆಸ್ಪತ್ರೆ ಎದುರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಪಡಿಸಿದ ಪ್ರತಿಭಟನಾಕಾರರು ಜಲ ಮಂಡಳಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಯಂತ್ರಗಳ ಮೂಲಕ ಮಾಡಬೇಕಿದ್ದ ಕೆಲಸವನ್ನು ಮನುಷ್ಯರ ಮೂಲಕ ಮಾಡಿಸಲಾಗಿದೆ. ತಕ್ಷಣ ಅಧಿಕಾರಿಗಳು ಎಚ್ಚೆತ್ತಿದ್ದರೂ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಗೋಳು ತೋಡಿಕೊಂಡರು.
ಇದನ್ನೂ ಓದಿ:ಅರಂತೋಡು :ಕಾಡಿನಿಂದ ಊರಿಗೆ ಬಂದ ಒಂಟಿ ಸಲಗ ; ಈ ಆನೆಯಲ್ಲಿದೆ ಒಂದು ವಿಶೇಷತೆ
ಮೃತರ ಕುಟುಂಬಗಳಿಗೆ ಸೂಕ್ತ ನ್ಯಾಯ ಒದಗಿಸಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜರಗಿಸುವಂತೆ ಪ್ರತಿಭಟನಾಕಾರರು ಹಾಗೂ ಕುಟುಂಬದ ಸದಸ್ಯರು ಆಗ್ರಹಿಸಿದರು.