Advertisement

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

11:55 AM May 10, 2024 | Team Udayavani |

ಕಲಬುರಗಿ: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಸರಳ ಮತ್ತು ಸಂಕೇತವಾಗಿ ಆಚರಿಸಲಾಯಿತು.

Advertisement

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಜಗತ್ತ್ ವೃತ್ತದಲ್ಲಿರುವ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.

ಕಲಬುರಗಿ ಶಹಾಬಜಾರ ಸಾರಂಗಮಠ, ಶ್ರೀಶೈಲ ಹಾಗೂ ಸುಲಫಲಮಠ, ಜಗದ್ಗುರು, ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಷಟಸ್ಥಲ ಧ್ವಜಾರೋಹಣ ನೇರವೇರಿಸಿದರು.

ನಗರ ಪೋಲಿಸ್ ಆಯುಕ್ತ ಚೇತನ್ ಆರ್. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೈ, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಾಧವ ಗಿತ್ತೆ, ಸಹಾಯಕ ಆಯುಕ್ತೆ ರೂಪಿಂದ್ರ ಕೌರ್, ಬಸವ ಸಮಿತಿ ಜಯಂತ್ಯೋತ್ಸವ ಅಧ್ಯಕ್ಷ ವಿನೋದ ಪಾಟೀಲ ಸರಡಗಿ, ಅಖಿಲ ಭಾರತ ವೀರಶೈವ ಲಿಂಗಾಯಿತ ಸಮಾಜದ ಶರಣಕುಮಾರ ಮೋದಿ, ಜಿಲ್ಲಾ ವೀರಶೈವ ಸಮಾಜ ಅರುಣಕುಮಾರ ಎಸ್. ಪಾಟೀಲ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಎಸ್ ರೆಡ್ಡಿ, ಉಪಾಧ್ಯಕ್ಷ ಉದಯಕುಮಾರ ಪಾಟೀಲ, ಕಾರ್ಯದರ್ಶಿ ರಮೇಶ ತೆಗ್ಗಿನಮನೆ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next