Advertisement

ಶರಣ-ಸಂತರ ಪ್ರತಿಮೆ ಸ್ಥಾಪನೆಗೆ ಯೋಜನೆ

10:59 AM Nov 16, 2019 | Naveen |

ಕಲಬುರಗಿ: ನಗರದ ಜಗತ್‌ ವೃತ್ತದಿಂದ ಯಲ್ಲಮ್ಮ ದೇವಸ್ಥಾನ ಮಧ್ಯೆ ಟ್ಯಾಂಕ್‌ ಬಂಡ್‌ ರಸ್ತೆಯಲ್ಲಿ ಎಲ್ಲ ಶರಣ-ಸಂತರ ಪ್ರತಿಮೆ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ. ಅಲ್ಲಿ ಕನಕದಾಸರು ಮತ್ತು ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.

Advertisement

ನಗರದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ನಗರದಲ್ಲಿ ಕನಕ ಭವನ ನಿರ್ಮಾಣಕ್ಕೂ ಪ್ರಯತ್ನ ಮಾಡಲಾಗುವುದು. ಸಮಾಜದ ಜಾಗ ಇದ್ದರೆ, ಭವನ ನಿರ್ಮಾಣಕ್ಕೆ ಕೆಕೆಆರ್‌ಡಿಬಿಯಿಂದ ಅನುದಾನ ಒದಗಿಸಲಾಗುವುದು. ಇಲ್ಲವಾದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಕೊಟ್ಟು, ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ತಿಪ್ಪಣ್ಣ ಗುಂಡಗುರ್ತಿ ಬಳಬಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ಸಮಾಜದ ಯುವಕ-ಯುವತಿಯರಿಗೆ ತೊಂದರೆಯಾಗುತ್ತಿದ್ದು, ಸರ್ಕಾರ ಇದರ ಬಗ್ಗೆ ಗಮನಹರಿಸಿ ಪರಿಹಾರ ಕಲ್ಪಿಸಬೇಕೆಂದು ಮನವಿ ಮಾಡಿದರು.

ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್‌ ಸದಸ್ಯ ಬಿ.ಜಿ.ಪಾಟೀಲ, ಜಿಲ್ಲಾಧಿಕಾರಿ ಬಿ.ಶರತ್‌ ಮಾತನಾಡಿದರು. ದಿವ್ಯ ಸಾನಿಧ್ಯ ವಹಿಸಿದ್ದ ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕಗುರು ಪೀಠದ ಲಿಂಗಬೀರ ದೇವರು ಆಶೀರ್ವಚನ ನೀಡಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್‌ ಸದಸ್ಯ ಹಾಗೂ ಇತಿಹಾಸ ಉಪನ್ಯಾಸಕ ಡಾ| ಬಾಬು ಪೂಜಾರಿ ಕನಕನ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು. ಇದಕ್ಕೂ ಮುನ್ನ ಜಿ.ಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಕಾರ್ಯಕ್ರಮ ಉದ್ಘಾಟಿಸಿದರು.

Advertisement

ವಿಧಾನಪರಿಷತ್‌ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌, ಜಿಪಂ ಸಿಇಒ ಡಾ| ಪಿ.ರಾಜಾ, ಡಿಸಿಪಿ ಕಿಶೋರ ಬಾಬು, ಅಪರ ಜಿಲ್ಲಾ ಧಿಕಾರಿ ಡಾ| ಶಂಕರಪ್ಪ ವಣಿಕ್ಯಾಳ, ಪ್ರೊಬೇಷನರ್‌ ಐಎಎಸ್‌ ಅಧಿಕಾರಿ ಡಾ| ಬಿ. ಗೋಪಾಲಕಷ್ಣ ಹಾಗೂ ಸಮಾಜದ ಗಣ್ಯರು ಹಾಗೂ ಮುಖಂಡರು ಪಾಲ್ಗೊಂಡಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಸ್ವಾಗತಿಸಿದರು. ಶಿವಾನಂದ ಅಣಜಗಿ ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next