Advertisement

Kalaburagi: ಪಾಲಿಕೆ ಉಪ ಆಯುಕ್ತರ‌ ಮನೆ ಮೇಲೆ ಲೋಕಾಯುಕ್ತ ದಾಳಿ

04:02 PM Dec 10, 2024 | Team Udayavani |

ಕಲಬುರಗಿ: ಕಳೆದ 20 ವರ್ಷಗಳಿಂದ ಇಲ್ಲಿನ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸದ್ಯ ಉಪ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಆರ್. ಪಿ. ಜಾಧವ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

Advertisement

ಆರ್.ಪಿ ಜಾಧವ್ ಅವರ ಕಲಬುರಗಿ ನಗರದ ಉದಯನಗರ ಬಡಾವಣೆಯ ಮನೆ ಮೇಲೆ ದಾಳಿ ನಡೆಸಲಾಗಿ, ಅಕ್ರಮ ಆಸ್ತಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಅದೇ ತೆರನಾಗಿ ಕಲಬುರಗಿ ನಗರದ ಹೊರ ವಲಯ ಫಾರ್ಮ್ ಹೌಸ್ ಸೇರಿ ಇತರೆಡೆ ದಾಳಿ ನಡೆಸಲಾಗಿದೆ. ದಾಳಿ ವೇಳೆಯಲ್ಲಿ ನಗದು ಹಣ ಹಾಗೂ ಚಿನ್ನಾಭರಣ ಪತ್ತೆಯಾಗಿವೆ.‌

ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ದೂರಿನ ಮೇರೆಗೆ ಲೋಕಾಯುಕ್ತ ದಾಳಿ‌ ನಡೆದಿದೆ.‌

ಲೋಕಾಯುಕ್ತ ಎಸ್ಪಿ ಬಿ.ಕೆ ಉಮೇಶ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪರಿಶೀಲನೆ ಮುಂದುವರೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next