ಕಲಬುರಗಿ: ಮನೆ ಹಾಗೂ ಅಪಾರ್ಟ್‌ಮೆಂಟ್ ನಲ್ಲಿ ವೇಶಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ನಗರ ಪೊಲೀಸ್ ಅಧಿಕಾರಿಗಳು ಮತ್ತು ಸಿಬಂದಿಗಳು ದಾಳಿ ನಡೆಸಿದ್ದಾರೆ.
ನಗರದ ರಾಘವೇಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಲಕ್ಷ್ಮಿ ಲೇ ಔಟ್ ನಲ್ಲಿರುವ ಅಪಾರ್ಟ್‌ಮೆಂಟ್ ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಇಬ್ಬರು ಪುರುಷರನ್ನು ವಶಕ್ಕೆ ಪಡೆದು ಹಣ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿ ಗೀತಾದೇವಿ ಹೊಸಮನಿ ವಿರುದ್ದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶರಣ ನಗರ ಕಾಲೋನಿಯ ಮನೆಯೊಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆದಿದೆ ಎಂಬ ಖಚಿತ ಮಾಹಿತಿ ಸಂಗ್ರಹಿಸಿ ದಾಳಿ ಮಾಡಲಾಗಿದ್ದು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಒಬ್ಬಳು ಮಹಿಳೆ ಹಾಗೂ ಒಬ್ಬ ಪುರುಷರನ್ನು ವಶಕ್ಕೆ ಪಡೆದು ಹಣ ಪಢದು ವೇಶ್ಯಾವಾಟಿಕೆ ನಡೆಸುತ್ತಿದ್ದ ರೇಣುಕಾ ವಿರುದ್ದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಎರಡು ಪ್ರತ್ಯೇಕ ದಾಳಿಯನ್ನು ಕಲಬುರಗಿ ಮಹಾನಗರ ಪೊಲೀಸ್ ಉಪ ಆಯುಕ್ತರಾದ ಅಡ್ಡೂರು ಶ್ರೀನಿವಾಸಲು, ಐ ಎ.ಚಂದ್ರಪ್ಪ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಸಹಾಯಕ ಪೊಲೀಸ್ ಆಯುಕ್ತ ಸಂತೋಷ ಬನ್ನಟ್ಟಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಬ್ಬಂದಿಗಳಾದ ಸುನೀಲ್ ಕುಮಾರ, ಆಶೋಕ, ಅಂಬಾಜಿ, ಶಿವಕುಮಾರ, ಅಶೋಕ ಕಟಕೆ, ವಿಶ್ವನಾಥ, ಶ್ರೀ ಶೈಲ, ಅರವಿಂದ, ನಾಗರಾಜ, ಸಿಇಎನ್ ಪೋಲಿಸ್ ಠಾಣೆಯ ಮಹಿಳಾ ಸಿಬಂದಿಗಳಾದ ಅನ್ನದಾನೇಶ್ವರಿ, ಅಂಜಲಿ ಒಳಗೊಂಡ ತಂಡ ಯಶಸ್ವಿ ದಾಳಿ ನಡೆಸಿದೆ.
Related Articles
ದಾಳಿಯನ್ನು ಯಶಸ್ವಿಯಾಗಿ ಕೈಗೊಂಡಿರುವುದಕ್ಕೆ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬಂದಿಯವರಿಗೆ ಪೊಲೀಸ್ ಆಯುಕ್ತರಾದ ಚೇತನ ಆರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.