Advertisement

ಕಾಮಗಾರಿ ಮಾಹಿತಿ ನೀಡದಿದ್ದರೆ ಕೇಸ್‌

12:48 PM Jan 23, 2020 | Naveen |

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡದ ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ ಯಾದವ ಎಚ್ಚರಿಕೆ ನೀಡಿದರು.

Advertisement

ಪ್ರಾದೇಶಿಕ ಆಯುಕ್ತರ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾಮಗಾರಿಗಳ ಕುರಿತು ಕೆಆರ್‌ಐಡಿಎಲ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಹಲವು ಕಾಮಗಾರಿಗಳ ಬಗೆಗಿನ ಮಾಹಿತಿಗಳು ಅಪೂರ್ಣವಾಗಿದ್ದು, ಅಂತಹ ಕಾಮಗಾರಿಗಳ ಪೂರ್ಣ ಮಾಹಿತಿ ಒದಗಿಸದಿದ್ದರೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದರು.

ಕೊಪ್ಪಳ ಜಿಲ್ಲೆಯಲ್ಲಿನ ಕಾಮಗಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಅಪೂರ್ಣವಾಗಿದ್ದು, ಹಳೆ ಕೆಲಸ ಪೂರ್ಣಗೊಳಿಸದೆ ಹೊಸ ಕಾಮಗಾರಿ ಏಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ಪ್ರಶ್ನಿಸಿದ ಅವರು, ಹಳೆ ಕಾಮಗಾರಿ ಸಂಪೂರ್ಣ ಪೂರ್ಣಗೊಳಿಸಿದ ದಾಖಲೆ ಸಲ್ಲಿಸಿ, ನಂತರ ಹೊಸ ಕಾಮಗಾರಿ ತೆಗೆದುಕೊಳ್ಳಬೇಕು ಎಂದು ತಾಕೀತು ಮಾಡಿದರು. ರಾಯಚೂರಿನಲ್ಲಿರುವ ಹಾಸ್ಟೆಲ್‌ ಕಟ್ಟಡಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಹಂಚನಾಳ ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಗೆ ಕಾಂಪೌಂಡ್‌ ನಿರ್ಮಿಸುವಲ್ಲಿ ಎದುರಾಗುತ್ತಿರುವ ಸಮಸ್ಯೆ ಕುರಿತು ಚರ್ಚಿಸಿ, ಸಂಬಂಧಪಟ್ಟ ಅಧಿಕಾರಿಗಳು ಕಾಂಪೌಂಡ್‌ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಬೇಕು ಎಂದು ಆದೇಶಿಸಿದರು.

ಸುಮಾರು ಮೂರ್‍ನಾಲ್ಕು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಅನಿರೀಕ್ಷಿತವಾಗಿ ಸ್ಥಗಿತಗೊಳಿಸುತ್ತಿರುವುದು ಏಕೆ? ಈ ಕುರಿತು ಅ ಧಿಕಾರಿ ಸಂಪೂರ್ಣ ದಾಖಲೆ ಒದಗಿಸಬೇಕು. ಮುಂಗಡ ಹಣ ನೀಡುತ್ತಿರುವುದರಿಂದ ಸಮಸ್ಯೆ ಹೆಚ್ಚಾಗುತ್ತಿದೆ. ಇದರಿಂದ ಅ ಧಿಕಾರಿಗಳು ಬೇಜವಾಬ್ದಾರಿ ತೋರಿಸುತ್ತಿದ್ದಾರೆ. ಹೀಗಾಗಿ ಮುಂಗಡ ಹಣ ನೀಡುವುದು ಸೂಕ್ತವಲ್ಲ ಎಂದರು.

ಯಾದಗಿರಿ ಜಿಲ್ಲೆಯಲ್ಲಿಯೂ ಬಾಕಿ ಕಾಮಗಾರಿಗಳು ಹೆಚ್ಚಿನ ಸಂಖೆಯಲ್ಲಿದ್ದು, ಜ. 31ರೊಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಳ್ಳಾರಿ ಜಿಲ್ಲೆಯಲ್ಲಿನ ಕಾಮಗಾರಿಗಳು ಪ್ರಗತಿಯಲ್ಲಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನು
ಹೆಚ್ಚಿನ ಕೆಲಸ ಮಾಡಬೇಕು ಎಂದು ತಿಳಿಸಿದರು.

Advertisement

ಕೆಆರ್‌ಐಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ಪಾಲಯ್ಯ ಮಾತನಾಡಿ, ಅ ಧಿಕಾರಿಗಳು ಸರಕಾರದ ಕೆಲಸವನ್ನು ದೇವರ ಕೆಲಸವೆಂದು ತಿಳಿದು ಕೆಲಸ ಮಾಡಬೇಕು. ಕೆಲಸದ ನಿಮಿತ್ತ ಜಾರಿಕೊಳ್ಳುವಲ್ಲಿ ಬುದ್ಧಿವಂತಿಕೆ ತೋರಿಸುವ ಅಧಿಕಾರಿಗಳು, ಅದೇ ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕು. ಇಲ್ಲದಿದ್ದರೆ ಮುಲಾಜಿಲ್ಲದೇ ಚಾಟಿ ಏಟು ನೀಡಲಾಗುವುದು ಎಂದರು. ಕಲ್ಯಾಣ ಕರ್ನಾಟಕದ ಆರು ಜಿಲ್ಲೆಯ ಕೆಆರ್‌ಐಡಿಎಲ್‌ ಅ ಧಿಕಾರಿಗಳು ಮತ್ತು ಇನ್ನಿತರ ಅಧಿಕಾರಿಗಳು ಇದ್ದರು.

ಅಪೂರ್ಣವಿರುವ ಕಾಮಗಾರಿಗಳಲ್ಲಿನ ಸಮಸ್ಯೆಗಳ ಕುರಿತು ಅಧಿ ಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೆಲಸ ಮಾಡುವುದಾಗಿ ಜವಾಬ್ದಾರಿ ವಹಿಸಿಕೊಂಡು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವ ಅಧಿಕಾರಿಗಳಿಗೆ ನಾಚಿಕೆಯಾಗಬೇಕು. ಕೆಲಸ ಮಾಡದೆ ಹೆಚ್ಚುವರಿ ಕೆಲಸಗಾರರನ್ನು ನೇಮಿಸಿಕೊಳ್ಳುವ ಅಧಿಕಾರಿಗಳು ತಮ್ಮ ಕೆಲಸದಲ್ಲಿ ಶ್ರದ್ಧೆ ತೋರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಕೆಲಸ ಮಾಡುವ ಮನೋಭಾವನೆ ಅಧಿಕಾರಿಗಳಿಗಿಲ್ಲ. ಸುಮಾರು ಎರಡು ವರ್ಷಗಳ ಹಿಂದೆ ಆರಂಭವಾದ ಕಾಮಗಾರಿಗಳು ಕುಂಟುತ್ತಾ ಸಾಗಿರುವುದೇ ಅಧಿಕಾರಿಗಳ ಕಾರ್ಯವೈಖರಿ ಎಂತಹದು ಎನ್ನುವುದನ್ನು
ತೋರಿಸುತ್ತದೆ.
ಸುಬೋಧ ಯಾದವ,
ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ

Advertisement

Udayavani is now on Telegram. Click here to join our channel and stay updated with the latest news.

Next