Advertisement

ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 130 ಕ್ವಿಂಟಾಲ್ ಅಕ್ಕಿ ಪೊಲೀಸರ ವಶಕ್ಕೆ

06:53 PM May 18, 2021 | Team Udayavani |

ಕಲಬುರಗಿ: ಕರ್ನಾಟಕ ಸರ್ಕಾರದಿಂದ ಪಡಿತರ ಕಾರ್ಡ್ ದಾರರಿಗೆ ಹಂಚಿಕೆ ಆಗಬೇಕಾಗಿದ್ದ ಅಕ್ಕಿ ಕಾಳಸಂತೆಯಲ್ಲಿ ಮಹಾರಾಷ್ಟ್ರದ ಪಾಲಾಗುತ್ತಿರುವಾಗ ಜಿಲ್ಲೆಯ ಅಫಜಲಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ತುಳಜಾಪುರದ ಗುಲಾಬಚಂದ್ ರಾಠೋಡ ಎಂಬುವವರು ಈ ಅಕ್ಕಿ ಸಾಗಿಸುತ್ತಿದ್ದರು. ಅಫಜಲಪುರ ತಾಲೂಕಿನ ಬಳ್ಳೂರ್ಗಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ತಪಾಸಣೆ ವೇಳೆ ಈ ಅಕ್ರಮ ಪತ್ತೆಯಾಗಿದೆ.

ಅಂದಾಜು 130 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಇದರ ಒಟ್ಟು ಮೌಲ್ಯ 2, 86,600 ರೂ. ಆಗಿದ್ದು, ಸಂಬಂಧಪಟ್ಟ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ತಿಳಿಸಿದ್ದಾರೆ.

ಇದನ್ನೂ ಓದಿ :ಕಾಪು; ಕಡಲ್ಕೊರೆತ ಪ್ರದೇಶಗಳಿಗೆ ಸಚಿವ ಆರ್.ಅಶೋಕ್ ಭೇಟಿ

ಈ ಕಾರ್ಯಾಚರಣೆ ವೇಳೆ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ಐ ವಿಶ್ವನಾಥ ಮುದರೆಡ್ಡಿ, ಆಹಾರ ಇಲಾಖೆ ಶಿರಸ್ತೆದಾರ ವೀರಯ್ಯಸ್ವಾಮಿ ಹೊಸಮಠ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next