Advertisement
ಕಲಬುರಗಿ ನಗರದಲ್ಲಿ ಸಂಬಂಧವಿರದ ಏಳು ವಿಧಾನ ಪರಿಷತ್ ಸದಸ್ಯರ ಹೆಸರನ್ನು ಕಲಬುರಗಿ ಮಹಾನಗರದ ಮತದಾರರ ಪಟ್ಟಿಯಲ್ಲಿ ಸೇರಿಸಿ ವಾಮಮಾರ್ಗದಿಂದ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಇನ್ನಿಲ್ಲದ ಹುನ್ನಾರ ನಡೆಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಟೀಕಿಸಿದರು.
Related Articles
Advertisement
ಏಳು ಜನ ವಿಧಾನ ಪರಿಷತ್ ಸದಸ್ಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಸ್ವತ: ಮುಖ್ಯಮಂತ್ರಿಗಳೇ ಕರೆ ಮಾಡಿ, ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಹಾಗೂ ಸಹಾಯಕ ಆಯುಕ್ತರ ಮೇಲೆ ಇನ್ನಿಲ್ಲದ ಒತ್ತಡ ಹಾಗೂ ಬೆದರಿಕೆ ಸಹ ಹಾಕಿದ್ದು, ಒಂದೆಡೆ ಬಿಜೆಪಿ ಮುಖಂಡರು ಮತ್ತೊಂದೆಡೆ ಹಣ ಆಮಿಷ ಒಡ್ಡುತ್ತಿದ್ದಾರೆ ಎಂದು ಮಾಜಿ ಸಚಿವರು ಗಂಭೀರ ಆರೋಪ ಮಾಡಿದರು.
ಅಧಿಕಾರಿಗಳು ಮುಖ್ಯಮಂತ್ರಿಗಳ ಹಾಗೂ ಬಿಜೆಪಿ ಮುಖಂಡರ ಒತ್ತಡಕ್ಕೆ ಮಣಿದು, ಆಮಿಷಕ್ಕೆ ಒಳಗಾಗಿ ಯಾವುದೇ ವಿಚಾರಣೆ ನಡೆಸದೆ ಪೂರ್ವಾಪರ ಅವಲೋಕಿಸದೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದಲ್ಲಿ ಕಾಂಗ್ರೆಸ್ ಪಕ್ಷ ಸುಮ್ಮನೇ ಕೂಡುವುದಿಲ್ಲ. ಕಾನೂನು ಹೋರಾಟದ ಜತೆಗೆ ಮುಂದೆ ಸರಕಾರ ಬಂದ ನಂತರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಸೇವೆಯಿಂದಲೇ ವಜಾಗೊಳಿಸಲಾಗುವುದಲ್ಲದೇ ಸಾಧ್ಯವಾದರೆ ಜೈಲಿಗೆ ಕಳುಹಿಸಲಾಗುವುದು. ಅಧಿಕಾರಿಗಳು ಐಎಎಸ್ ಆಗಿರಲಿ ಇನ್ನ್ಯಾರೇ ಆಗಿರಲಿ ಅವರನ್ನು ಬಿಡುವುದಿಲ್ಲ ಎಂದು ಡಾ. ಶರಣಪ್ರಕಾಶ ಪಾಟೀಲ್ ಗುಡುಗಿದರು.
ಈಗಾಗಲೇ ಏಳು ವಿಧಾನ ಪರಿಷತ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಸೇರಿಸದಿರುವಂತೆ ಚುನಾವಣಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಲಾಗಿದೆಯಲ್ಲದೇ ಕಾನೂನು ಹೋರಾಟದ ನಿಟ್ಟಿನಲ್ಲಿ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಮೇಯರ್ ಶರಣು ಮೋದಿ ಸೇರಿದಂತೆ ಮುಂತಾದವರಿದ್ದರು