Advertisement

ಕಲಬುರಗಿ: ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿ

10:12 AM Jul 14, 2021 | Team Udayavani |

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯ ಜೈಲ್ ವಾರ್ಡ್ ನಿಂದ ವಿಚಾರಣಾಧೀನ ಕೈದಿಯೋರ್ವ ಪರಾರಿಯಾಗಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

Advertisement

22 ವರ್ಷದ ಸಿದ್ದಪ್ಪ ಅಲ್ಲೂರು ಎಂಬಾತನೇ ಪರಾರಿಯಾಗಿರುವ ಕೈದಿ. ಈತ ಚಿತ್ತಾಪುರ ತಾಲೂಕಿನ ಅಲ್ಲೂರು (ಬಿ) ಗ್ರಾಮದ ನಿವಾಸಿಯಾಗಿದ್ದು, ಎರಡು ತಿಂಗಳ ಹಿಂದೆ ಸ್ನೇಹಿತನ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ.

ಇದನ್ನೂ ಓದಿ: ನಿರಂತರ ಮಳೆ; ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಈ ಮೊದಲು ಕೇಂದ್ರ ಕಾರಾಗೃಹದಲ್ಲಿದ್ದ ಈತ, ಅಲ್ಲಿ ಅಸಹಜ ವರ್ತನೆ ತೋರಿದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಆಸ್ಪತ್ರೆಯ ಜೈಲು ವಾರ್ಡ್ ಗೆ ಸ್ಥಳಾಂತರ ಮಾಡಲಾಗಿತ್ತು.

ಆದರೆ, ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ವಾರ್ಡ್‌ನ ಕಿಟಕಿ ಮೂಲಕ ಓಡಿ ಹೋಗಿದ್ದಾನೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next