Advertisement

3.35 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

03:59 PM Jan 20, 2020 | Naveen |

ಕಲಬುರಗಿ: 2020ನೇ ಸಾಲಿನ ಮೊದಲನೇ ಸುತ್ತಿನ ಪಲ್ಸ್‌ ಪೋಲಿಯೋ ಕಾರ್ಯಕ್ರಮಕ್ಕೆ ರವಿವಾರ ಐದು ವರ್ಷದೊಳಗಿನ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಜಿಲ್ಲಾಧಿಕಾರಿ ಬಿ. ಶರತ್‌ ಚಾಲನೆ ನೀಡಿದರು.

Advertisement

ನಗರದ ಜಗತ್‌ ವೃತ್ತದ ಸೆಂಟ್‌ ಜಾನ್‌ ಡಾ| ಮಲ್ಲಾರಾವ್‌ ಮಲ್ಲೆ ಆಸ್ಪತ್ರೆ ಹತ್ತಿರದ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್‌ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕಿದರು. ವಿವಿಧ ಇಲಾಖೆಗಳ ಹಾಗೂ ಸಂಘ ಸಂಸ್ಥೆಗಳ ಸಹಕಾರದಿಂದ ಜಿಲ್ಲಾದ್ಯಂತ ಜ.19ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಐದು ವರ್ಷದೊಳಗಿನ ಒಟ್ಟು 3,35,606 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಣಾ ಕಾರಿ ಡಾ| ಎಂ.ಎ. ಜಬ್ಟಾರ್‌ ತಿಳಿಸಿದರು.

1,490 ಪೋಲಿಯೋ ಬೂತ್‌ ರಚನೆ ಮಾಡಲಾಗಿದ್ದು, 3,296 ಆರೋಗ್ಯ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. 129 ಟ್ರಾನ್ಸಿಟ್‌ ತಂಡ, 29 ಮೊಬೈಲ್‌ ತಂಡಗಳನ್ನು ನೇಮಿಸಲಾಗಿದ್ದು, 327 ಜನರನ್ನು ಮೇಲುಸ್ತುವಾರಿ ಕಾರ್ಯಕ್ಕೆ ನಿಯೋಜಿಸಲಾಗಿದೆ. ಎಲ್ಲ ಬಸ್‌ ನಿಲ್ದಾಣ, ರೈಲು ನಿಲ್ದಾಣ, ಕೊಳಚೆ ಪ್ರದೇಶ ಹಾಗೂ ವಲಸೆ ಹೋಗುವ, ಕಟ್ಟಡ ಕಾರ್ಮಿಕರು, ಕಬ್ಬು ಕಟಾವು ಮಾಡುವ ಕಾರ್ಮಿಕರು, ಇಟ್ಟಂಗಿ ಭಟ್ಟಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಲಾಗುವುದು ಎಂದು ಮಾಹಿತಿ ನೀಡಿದರು.

ಜಿ.ಪಂ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಸಿಇಒ ಡಾ| ಪಿ. ರಾಜಾ, ಜಿ.ಪಂ ಶಿಕ್ಷಣ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ದಾಮೋದರ ರೆಡ್ಡಿ ಪಾಟೀಲ, ಆರೋಗ್ಯ ಇಲಾಖೆ ಜಂಟಿ ನಿರ್ದೇಶಕ ಡಾ| ಶಿವಾನಂದ ಸುರಗಾಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಅನಿಲಕುಮಾರ ತಾಳಿಕೋಟಿ, ಆರೋಗ್ಯ ಇಲಾಖೆಯ ಕಲಬುರಗಿ ಉಪವಿಭಾಗದ ನಿರ್ದೇಶಕ ಡಾ| ಹಬೀಬ್‌ ಉಸ್ಮಾನ್‌, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ|ಪ್ರಭುಲಿಂಗ ಮಾನಕರ್‌ ಹಾಗೂ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next