Advertisement

Kalaburagi;ಅವ್ಯವಹಾರಕ್ಕೆ ಸಂಬಂಧಿಸಿ ಮೂವರು ಇಂಜಿನಿಯರ್ ಗಳ ಅಮಾನತು

09:46 PM Sep 23, 2023 | Team Udayavani |

ಕಲಬುರಗಿ: 2020-21ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 110 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಸೇಡಂ ತಾಲ್ಲೂಕಿನ ಬಿಬ್ಬಳ್ಳಿ ಗ್ರಾಮದ ಚರಂಡಿ ನಿರ್ಮಾಣ ಕಾರ್ಯದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇಂಜಿಯರ್ ಗಳನ್ನು ಅಮಾನತು ಮಾಡಲಾಗಿದೆ.

Advertisement

ಜಿಲ್ಲೆಯ ಪಂಚಾಯತರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮೋನಪ್ಪ ಸೇರಿದಂತೆ ಸಹಾಯಕ ಕಾರ್ಯಪಾಲಕ ಎಂಜಿನಿಯ‌ರ್ ಹನುಮಪ್ಪ ಅಡವಣಿ, ಸೇಡಂ ಉಪವಿಭಾಗದ ಕಿರಿಯ ಎಂಜಿನಿಯರ್ ಮಿರಾಜುದ್ದೀನ್ ಪಟೇಲ್ ಎನ್ನುವ ಮೂವರು ಎಂಜಿನಿಯರ್‌ಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಅಮಾನತು ಮಾಡಿದೆ ಎಂದು ಗೊತ್ತಾಗಿದೆ.

ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಜಿಲ್ಲೆಯ ಸೇಡಂ ತಾಲ್ಲೂಕಿನಲ್ಲಿ ಕೈಗೆತ್ತಿಕೊಂಡ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಯಲ್ಲಿ ಅವ್ಯವಹಾರ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಈ ಅಮಾನತು ಮಾಡಲಾಗಿದೆ.

ಸೇಡಂ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದಿಂದ ಉಡಗಿಯವರೆಗಿನ ರಸ್ತೆ ಅಭಿವೃದ್ಧಿ ಹಾಗೂ ಸೇಡಂ ಮುಖ್ಯ ರಸ್ತೆಯಿಂದ ಆಡಕಿ ಗ್ರಾಮದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next