Advertisement

ವಾಡಿ ಸುತ್ತಲಿನ ತಾಂಡಾ ಈಗ ಸ್ಲಂ

11:35 AM Jul 04, 2020 | Naveen |

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣಕ್ಕೆ ಹೊಂದಿಕೊಂಡಿರುವ ಎಲ್ಲ ತಾಂಡಾಗಳನ್ನು ಕೊಳಚೆ ಪ್ರದೇಶಗಳೆಂದು ಘೋಷಿಸಲು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಹಳ್ಳಿ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಕೊಳಗೇರಿ ಅಭಿವೃದ್ಧಿ ಮಂಡಳಿ ವಿಭಾಗೀಯ ಕಚೇರಿಯಲ್ಲಿ ಶುಕ್ರವಾರ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸಭೆಯಲ್ಲಿ ಸಂಸದ ಡಾ| ಉಮೇಶ ಜಾಧವ ಮಾಡಿದ ಮನವಿ ಮೇರೆಗೆ ಈ ಸೂಚನೆ ನೀಡಿದರು. ಕೊಳಗೇರಿ ನಿವಾಸಿಗಳಿಗೆ ಇದುವರೆಗೂ ಹಕ್ಕುಪತ್ರ ನೀಡದಿರುವ ಬಗ್ಗೆ ಅಧಿಕಾರಿಗಳನ್ನು ಕುಮಟಹಳ್ಳಿ ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಉತ್ತರಿಸಿದ ಮಂಡಳಿ ಅಧಿಕಾರಿಗಳು ಹಕ್ಕುಪತ್ರ ವಿತರಣೆ ಸಂಬಂಧ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದ್ದು, ಸರ್ಕಾರದಿಂದ ನಿರ್ದೇಶನ ಬಂದ ನಂತರ ಕ್ರಮ ಕೈಗೊಳ್ಳುವುದಾಗಿ ಮಾಹಿತಿ ನೀಡಿದರು.

ಜಿಲ್ಲೆಯ ಕೊಳಗೇರಿ ಜನರ ಆರೋಗ್ಯದ ದೃಷ್ಟಿಯಿಂದ ಜನೌಷಧ ಮಳಿಗೆ ತೆರೆಯಲು ಸೂಕ್ತವಾದ ಸ್ಥಳಗಳ ಬಗ್ಗೆ ಮಾಹಿತಿ ನೀಡಬೇಕು. ಮುಂಬರುವ ದಿನಗಳಲ್ಲಿ ಎಲ್ಲ ಕೊಳಗೇರಿ ಪ್ರದೇಶಗಳಿಗೆ ಭೇಟಿ ನೀಡಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಮಂಡಳಿಯ ವಿಭಾಗದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next