ಕಲಬುರಗಿ: ಇದೇ ನವೆಂಬರ್ 22 ರಂದು ಕಲಬುರಗಿ ವಿಮಾನ ನಿಲ್ದಾಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದು, ಇದಕ್ಕಾಗಿ ಪೂರ್ವ ಸಿದ್ಧತೆಗಳು ನಡೆದಿವೆ.
22ರಂದು ಮಧ್ಯಾಹ್ನ 1.35 ಕ್ಕೆ ಬೆಂಗಳೂರು ಕೆಂಪೆಗೌಡ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನದ ಮೂಲಕ ಕಲಬುರಗಗೆ ಆಗಮಿಸಿ ಉದ್ಘಾಟನೆ ನೆರವೇರಿಸುವರು.
ಉದ್ಘಾಟನೆ ಸಮಾರಂಭ ಐತಿಹಾಸಿಕವಾಗಿ ನೆರವೇರಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಉದ್ಯಮಿಗಳು, ಗಣ್ಯರು, ಜನಪ್ರತಿನಿಧಿಗಳು ಸೇರಿದಂತೆ 5000 ಜನರಿಗೆ ಆಸನದ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ. ಉದ್ಘಾಟನೆ ನಂತರ ಸಮಾರಂಭ ಉದ್ದೇಶಿಸಿ ಮುಖ್ಯಮಂತ್ರಿಗಳು ಭಾಷಣ ಮಾಡಲಿದ್ದಾರೆ.
ಕೇಂದ್ರದ ವಿಮಾನಯಾನ ಸಚಿವರು, ಡಿಸಿಎಂ ಗೋವಿಂದ ಕಾರಜೋಳ, ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಇತರ ರು ಪಾಲ್ಗೊಳ್ಳುವರು.
ವಿಮಾನ ನಿಲ್ದಾಣ ಉದ್ಘಾಟನೆಯ ಸಿದ್ದತೆಗಳನ್ನು ಕಲಬುರಗಿ ಜಿಲ್ಲಾಧಿಕಾರಿ ಬಿ ಶರತ್, ಡಿಸಿಪಿ ಹಾಗೂ ವಿಮಾನಯಾನ ಅಧಿಕಾರಿಗಳು ರವಿವಾರ ಬೆಳಿಗ್ಗೆ ವಿಮಾನ ನಿಲ್ದಾಣ ತೆರಳಿ ಪರಿಶೀಲನೆ ನಡೆಸಿದರು.