Advertisement

ಸಮಸ್ಯೆಗೆ ಸ್ಪಂದಿಸಲು ಸೂಚನೆ

05:06 PM Jun 01, 2020 | Naveen |

ಕಲಬುರಗಿ: ಕೋವಿಡ್ ನಿಂದ ಜನರು ತೀವ್ರ ಸಂಕಷ್ಟಕ್ಕೆ ಎದುರಾಗಿರುವುದರಿಂದ ಜತೆಗೆ ಮಳೆಗಾಲ ಪ್ರಾರಂಭ ವಾಗುತ್ತಿರುವುದರಿಂದ ಅಧಿಕಾರಿಗಳು ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವಂತೆ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅಧಿಕಾರಿಗಳಿಗೆ ಸೂಚಿಸಿದರು.

Advertisement

ಕ್ಷೇತ್ರ ವ್ಯಾಪ್ತಿಯ ನರೋಣಾ, ರಿಕ್ಕಿನ ಆಲೂರ, ಬೋದನ್‌, ಕೆರಿ ಅಂಬಲಗಾ, ಬೆಡಜೇವರ್ಗಿ, ಗುಂಜ ಬಬಲಾದ, ಕರಹರಿ, ಸಂಗೋಳಗಿ ಸೇರಿ ಇತರ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಕೋವಿಡ್ ಸವಾಲಾಗಿ ಪರಿಣಮಿಸಿದ್ದರಿಂದ ಜಾಗೃತಿ ವಹಿಸುವುದು ಅಗತ್ಯವಾಗಿದೆ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ ಎಂದರು.

ಮುಂಗಾರು ಹಂಗಾಮು ಪ್ರಾರಂಭವಾಗಿರುದರಿಂದ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು. ಶಾಸಕರು ಇದೇ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ, ಕಾರ್ಮಿಕರಿಗೆ ಶಾಸಕರು ಆಹಾರದ ಕಿಟ್‌ಗಳನ್ನು ವಿತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next