Advertisement
ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ನೀಡುವ ಕೋವಿಡ್ ಲಸಿಕೆ ಕಾರ್ಯ ಮುಂದುವರೆದಿದೆ. ಜನವರಿ 16ರಿಂದ 25 ರವರೆಗೆ ತಾಲ್ಲೂಕು ಆಸ್ಪತ್ರೆಗಳು ಸೇರಿ 108 ಕೇಂದ್ರಗಳಲ್ಲಿ 9489 ಆರೋಗ್ಯ ಸಿಬ್ಬಂದಿ ಪೈಕಿ 5350 ಫಲಾನುಭವಿಗಳಿಗೆ ಕೋವಿಡ್ ಲಸಿಕೆ ಹಾಕುವ ಮೂಲಕ ಶೇ.56 ಗುರಿ ಸಾ ಧಿಸಲಾಗಿದೆ. ಮುಂದಿನ ದಿನಗಳಲ್ಲಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆಯೂ ವಿಮಾನ ಸಂಚಾರ ಶುರುವಾಗಲಿದ್ದು, ವಿಮಾನ ನಿಲ್ದಾಣ ಪ್ರಾರಂಭದಿಂದ ಕಲ್ಯಾಣ ಕರ್ನಾಟಕ ಭಾಗದ ಕೈಗಾರಿಕಾ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಚಿವ ಕತ್ತಿ ಹೇಳಿದರು.
Related Articles
ಇದರಿಂದ ಈ ಭಾಗದ ವ್ಯಾಪಾರ-ವಹಿವಾಟು ಮತ್ತಷ್ಟು ಚಿಗುರಲಿದೆ. ಈ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ತರಬೇತಿ ಕೇಂದ್ರ ಶುರುವಾಗಿದ್ದು,
ಪೈಲಟ್ ಆಗಬೇಕೆಂದಿದ್ದ ಈ ಭಾಗದ ಆಕಾಂಕ್ಷಿಗಳ ಕನಸಿಗೆ ರೆಕ್ಕೆ ಮೂಡಿದೆ ಎಂದು ಸಚಿವ ಕತ್ತಿ ತಿಳಿಸಿದರು.
Advertisement
ಭಾರತದ 72ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಪರೇಡ್ ಕಮಾಂಡರ್ ಕಲಬುರಗಿ ಆರ್.ಪಿ.ಐ. ಡಿ.ಎ.ಆರ್. ಹನುಮಂತ ನಾಯಕಹಾಗೂ ಸಹಾಯಕ ಪರೇಡ್ ಕಮಾಂಡರ್ ಆರ್. ಎಸ್.ಐ., ಕೆ.ಎಸ್.ಆರ್.ಪಿ. ನಾಗೇಂದ್ರ ಕುಂಬಾರ ನೇತೃತ್ವದಲ್ಲಿ ನಡೆದ ಪರೇಡ್‌ನಲ್ಲಿ ಡಿ.ಎ.ಆರ್.,
ಕೆ.ಎಸ್.ಆರ್.ಪಿ., ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ, ಸಿವಿಲ್ ಜಿಲ್ಲಾ ತಂಡ, ಸಿವಿಲ್ ನಗರ ತಂಡ, ಕೇಂದ್ರ ಕಾರಾಗೃಹ, ಹೋಮ್‌ಗಾರ್ಡ್, ಅಬಕಾರಿ
ಇಲಾಖೆ, ಅರಣ್ಯ ಕಾರ್ಯಕಡೆ, ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ವಾದ್ಯ ವೃಂದ ಸೇರಿದಂತೆ ಒಟ್ಟು 11 ತುಕಡಿಗಳಿಂದ ಸಚಿವರು ಪೆರೇಡ್ ಗೌರವ
ವಂದನೆ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ವಿಠಲ ಬೀರಣ್ಣ ಪೂಜಾರಿ, ವಿಜಯಕುಮಾರ ಪ್ರಭುರಾವ್ ತಡಕಲ್, ಶಂಕರೆಪ್ಪ ರಾಮಶೆಟ್ಟಪ್ಪ ಹುಗ್ಗಿ, ಶಿವಲಿಂಗಪ್ಪ ಬಸಲಿಂಗಪ್ಪ ಪಾಟೀಲ ಹಾಗೂ ವೆಂಕಟರಾವ ಅರ್ಜುನ ಶಿಂಧೆ ಅವರನ್ನು ಸನ್ಮಾನಿಸಲಾಯಿತು. ಪತ್ರಕರ್ತರಾದ ಜಯತೀರ್ಥ ಪಾಟೀಲ, ಸಂಜಯ ಚಿಕ್ಕಮಠ, ಕ್ಯಾಮರಾಮನ್ ವಿಜಯಕುಮಾರ ಗಾಜರೆ, ಪತ್ರಿಕಾ ಛಾಯಾಗ್ರಾಹಕ ಅರುಣಕುಮಾರ ಕುಲಕರ್ಣಿ ಅವರನ್ನೂ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಅತ್ಯುತ್ತಮ ಸೇವೆ ಸಲ್ಲಿಸಿದ ಜಿಲ್ಲೆಯ ಏಳು ಜನ ವೈದ್ಯಾಧಿ ಕಾರಿಗಳನ್ನು ಸನ್ಮಾನಿಸಲಾಯಿತು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೂರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ತಲಾ 1 ಲಕ್ಷ ರೂ.
ಗಳ ಚೆಕ್ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ 2020-21ನೇ ಸಾಲಿನಲ್ಲಿ ಜಿಲ್ಲಾಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಯ್ಕೆಯಾದ ಜಿಲ್ಲೆಯ 11 ಜನ
ರೈತರನ್ನು ಸಹ ಸನ್ಮಾನಿಸಲಾಯಿತು. ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ್ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಸಂಸದ ಡಾ| ಉಮೇಶ ಜಿ. ಜಾಧವ, ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ವಲ್ಲಾಪುರೆ, ಶಶೀಲ ನಮೋಶಿ, ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ತಾಪಂ ಅಧ್ಯಕ್ಷ ಶಿವಾರಾಜ ಸಜ್ಜನ್, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರಾಧ್ಯಕ್ಷ ಸಿದ್ಧಾಜೀ ಪಾಟೀಲ್, ಕುಡಾ ಅಧ್ಯಕ್ಷ ದಯಾಘನ್ ಧಾರವಾಡಕರ್ ಉಪಸ್ಥಿತರಿದ್ದರು. ಪ್ರಾದೇಶಿಕ ಆಯುಕ್ತ ಡಾ| ಎನ್.ವಿ. ಪ್ರಸಾದ, ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ್ ಖರ್ಬಿಕರ್, ನಗರ ಪೊಲೀಸ್ ಆಯುಕ್ತ
ಎನ್. ಸತೀಶಕುಮಾರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ., ಜಿಲ್ಲಾ ಧಿಕಾರಿ ವಿ.ವಿ. ಜ್ಯೋತ್ಸ್ನಾ,
ಜಿಪಂ ಸಿಇಒ ಡಾ| ಪಿ. ರಾಜಾ, ಎಸ್‌ಪಿ ಡಾ| ಸಿಮಿ ಮರಿಯಮ್ ಜಾರ್ಜ್ ಇದ್ದರು.