Advertisement

ಪರಿಹಾರದ ಚೆಕ್‌ ವಿತರಣೆ

04:56 PM Jun 01, 2020 | Naveen |

ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಹಾದಾಸೋಹಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾ ಅವರು ಆಶಾ ಕಾರ್ಯಕರ್ತೆರಿಗಾಗಿ ರೂ.2 ಲಕ್ಷ ಸಹಾಯ ಧನದ ಚೆಕ್‌ನ್ನು ಜಿಲ್ಲಾ ಸಹಕಾರಿ ಸಂಘದ ಉಪ ನಿಬಂಧಕರಾದ ಸಿ.ಎಸ್‌. ನಿಂಬಾಳ ಮತ್ತು ಸಹಕಾರಿ ಇಲಾಖೆಯ ಇತರೆ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

Advertisement

ಡಾ.ಅಪ್ಪಾಜಿ ಮಾತನಾಡಿ, ಕೋವಿಡ್‌ -19 ವಿರುದ್ಧದ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರ ಕೊಡುಗೆ ಅಪಾರವಾಗಿದೆ. ಇವರ ಸತತ ಪ್ರಯತ್ನವನ್ನು ಗುರುತಿಸಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತಲಾ 3.000 ರೂ. ನೀಡುತ್ತಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ನೆರವು ಮತ್ತು ಅವರ ಕರ್ತವ್ಯಕ್ಕೆ ಬೆಂಬಲಿಸುವ ನಿಟ್ಟಿನಲ್ಲಿ ಸರಕಾರದೊಂದಿಗೆ ಕೈ ಜೋಡಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್‌ರಾದ ಮಾತೋಶ್ರೀ ದಾಕ್ಷಾಯಿಣಿ ಅವ್ವಾಜಿ, ಶರಣಬಸವ ವಿಶ್ವವಿದ್ಯಾಲಯದ ಡೀನ್‌ ಡಾ.ಲಕ್ಷ್ಮೀ ಮಾಕಾ, ಎಂ.ಸಿ.ಎ ವಿಭಾಗದ ಮುಖ್ಯಸ್ಥ ಪ್ರೊ. ಕಿರಣ ಮಾಕಾ ಇದ್ದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಿಂದ ರೂ.2 ಲಕ್ಷ ಸಹಾಯಧನ ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next