Advertisement

ಸಾವಿರ ಸಸಿ ನೆಡುವ ಕಾರ್ಯಕ್ಕೆ ಚಾಲನೆ

11:48 AM Jun 06, 2020 | Naveen |

ಕಲಬುರಗಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಳಂದ ತಾಲೂಕಿನ ಕಡಗಂಚಿ ಸಮೀಪದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಒಂದು ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಸಸಿ ನೆಟ್ಟು ನೀರೆರೆಯುವ ಮೂಲಕ ಚಾಲನೆ ನೀಡಿದರು.

Advertisement

ಕಳೆದ ಎರಡ್ಮೂರು ವರ್ಷದಲ್ಲಿ ಅರಣ್ಯ ಇಲಾಖೆಯಿಂದ ಕ್ಯಾಂಪಸ್‌ ಆವರಣದಲ್ಲಿ ನೆಡಲಾದ ಸಸಿಗಳ ಪೈಕಿ ಶೇ.90ರಷ್ಟು ಸಸಿಗಳು ನೆಟ್ಟು ಪೋಷಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಸಚಿವರು, ಸಸಿ ನೆಡುವುದು ಪುಣ್ಯದ ಕೆಲಸವಾಗಿದೆ ಎಂದರು. ಸಿಯುಕೆ ಆವರಣದಲ್ಲಿ ಒಂದು ಸಾವಿರ ಸೇರಿದಂತೆ ಜಿಲ್ಲಾದ್ಯಂತ ಒಟ್ಟಾರೆ ಎರಡು ಸಾವಿರ ಸಸಿಗಳನ್ನು ಸಾಮಾಜಿಕ ಅರಣ್ಯ ವಿಭಾಗದಿಂದ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಂದ ಗುಂಡಿ ಕೊರೆದು ನೆಡಲಾಯಿತು ಎಂದರು.

6.67 ಲಕ್ಷ ಸಸಿ ನಾಟಿ: ಜಿಪಂ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್‌.ಚವ್ಹಾಣ ಮಾತನಾಡಿ, ಕಳೆದ 2019-20ನೇ ಸಾಲಿನಲ್ಲಿ ಪ್ರತಿ ತಾಲೂಕಿನಲ್ಲಿ 95 ಸಾವಿರ ಸಸಿ ನೆಡಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 6.67 ಲಕ್ಷ ಸಸಿ ಬೆಳೆಸಲಾಗಿದೆ. ಈ ವರ್ಷ ದ್ವಿಗುಣ ಸಸಿಗಳನ್ನು ಬೆಳೆಸುವ ಗುರಿ ಹೊಂದಲಾಗಿದೆ ಎಂದರು. ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್‌ ಇಲಾಖೆಯ ಆಯುಕ್ತ ಅನಿರುದ್ಧ್ ಶ್ರವಣ್‌, ಸಿಇಒ ಡಾ.ಪಿ.ರಾಜಾ ಹಾಗೂ ಜನಪ್ರತಿನಿಧಿ, ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next