Advertisement

ಜಿಲ್ಲಾದ್ಯಂತ 15ರ ತನಕ ನಿಷೇಧಾಜ್ಞೆ ವಿಸ್ತರಣೆ

04:38 PM May 31, 2020 | Naveen |

ಕಲಬುರಗಿ: ಕೋವಿಡ್ ವೈರಸ್‌ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಜೂ. 15ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್‌ ಬಿ. ಆದೇಶ ಹೊರಡಿಸಿದ್ದಾರೆ. ಕೋವಿಡ್ ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಜಿಲ್ಲೆಯಾದ್ಯಂತ ಮಾ. 19ರ ರಾತ್ರಿ 8ರಿಂದ ಮೇ 31ರ ರಾತ್ರಿ 8ರ ವರೆಗೆ ಒಟ್ಟು 74 ದಿನಗಳವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಆದರೆ ಈಗಿನ ಪರಿಸ್ಥಿತಿಯ ಅಗತ್ಯತೆ ಮನಗಂಡು ಜಿಲ್ಲಾಧಿಕಾರಿಗಳು ಜೂ. 15ರ ವರೆಗೆ ನಿಷೇಧಾಜ್ಞೆ ವಿಸ್ತರಿಸಿದ್ದಾರೆ.

Advertisement

ನಿಷೇಧಾಜ್ಞೆ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು- ಗುಂಪಾಗಿ ಚಲಿಸುವುದು, ಅನಾವಶ್ಯಕವಾಗಿ ಹಾಗೂ ಕಾರಣರಹಿತವಾಗಿ ಸಂಚರಿಸುವಂತಿಲ್ಲ. ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಖರೀದಿಸುವ ಅಗತ್ಯವಿಲ್ಲ. ಈ ಆದೇಶ ಅಗತ್ಯ ಸೇವೆಗಳಿಗೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ರವಿವಾರ ನಿಷೇಧಾಜ್ಞೆ ತೆರವು: ಸಾರ್ವಜನಿಕರ ಕೋರಿಕೆ ಮೇರೆಗೆ ಮೇ 31ರ ರವಿವಾರದ ಸಂಪೂರ್ಣ ಲಾಕ್‌ ಡೌನ್‌ ಅನ್ನು ರಾಜ್ಯ ಸರ್ಕಾರವು ಮಾರ್ಪಡಿಸಿ ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ನಿಷೇಧಾಜ್ಞೆಯಿಂದ ವಿನಾಯಿತಿ ನೀಡಿ, ಎಂದಿನಂತೆ ಚಟುವಟಿಕೆ ನಡೆಸಲು ಆದೇಶಿಸಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ರವಿವಾರ (ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ) ನಿಷೇಧಾಜ್ಞೆ ತೆರವುಗೊಳಿಸಿದೆ ಎಂದು ನಗರ ಪೊಲೀಸ್‌ ಆಯುಕ್ತ ಎನ್‌. ಸತೀಶಕುಮಾರ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next