Advertisement
ಕಲಬುರಗಿ: ಜಿಲ್ಲಾದ್ಯಂತ ಕಳೆದ ಮೂರು ತಿಂಗಳಿಂದ ಸಾಂಕ್ರಾಮಿಕ ರೋಗಗಳ ಆರ್ಭಟ ಹೆಚ್ಚಾಗಿದೆ. ಮಕ್ಕಳಿಂದ ಹಿಡಿದು ಯುವಕರು, ವಯೋವೃದ್ಧರು ಮಹಾಮಾರಿ ಡೆಂಘೀ ಜ್ವರ ಮತ್ತು ಚಿಕೂನ್ ಗುನ್ಯಾ ರೋಗಕ್ಕೆ ತುತ್ತಾಗಿ, ಬಳಲುತ್ತಿದ್ದಾರೆ. ಅಕ್ಟೋಬರ್‌ನಿಂದ ಇದುವರೆಗೆ ಶಂಕಿತ ಡೆಂಘೀ ಜ್ವರಕ್ಕೆ ಏಳು ಜನರು ಬಲಿಯಾಗಿದ್ದಾರೆ.
Related Articles
Advertisement
ಹೆಚ್ಚಿದ ಆತಂಕ: ಜನವರಿ ತಿಂಗಳಿಂದಲೇ ಡೆಂಘೀ ಜ್ವರ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳು ಬೆಳಕಿಗೆ ಬಂದಿವೆ. ಆಗಸ್ಟ್‌ನಿಂದ ಜನರಲ್ಲಿ ಈ ರೋಗಗಳು ಹೆಚ್ಚಿನ ಆತಂಕ ಸೃಷ್ಟಿಸಿವೆ. ಮಹಾನಗರ ಮಾತ್ರವಲ್ಲದೇ ಜಿಲ್ಲೆಯ ಅನೇಕ ಭಾಗಗಳಲ್ಲಿ ಡೆಂಘೀ ಜ್ವರ ಜನರನ್ನು ಬಾಧಿಸುತ್ತಿದೆ. ಆದರೂ, ಆರೋಗ್ಯ ಇಲಾಖೆ ಅಧಿಕಾರಿಗಳು ರೋಗಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿವೆ.
ಜಿಲ್ಲಾಸ್ಪತ್ರೆ ಹಾಗೂ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳು ಖಾಸಗಿ ಆಸ್ಪತ್ರೆ ಹಾಗೂ ಹೊರ ಜಿಲ್ಲೆಗಳತ್ತ ಮುಖ ಮಾಡುವಂತೆ ಆಗಿದೆ. ಇದನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಸರಿಯಾದ ಸಮಯಕ್ಕೆ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ಮಾನವ ಹಕ್ಕುಗಳ ಹೋರಾಟಗಾರ ರಿಯಾಜುದ್ದೀನ್ ಅಸಮಾಧಾನ ಹೊರ ಹಾಕಿದ್ದಾರೆ.
ಡೆಂಘೀ ಜ್ವರ ಹಾಗೂ ಚಿಕೂನ್ ಗುನ್ಯಾ ಹತೋಟಿಗೆ ತರುವುದು ನಮ್ಮ ಕೈಯಲ್ಲೇ ಇದೆ. ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರ ಸ್ವತ್ಛವಾಗಿ ಇಟ್ಟುಕೊಳ್ಳಬೇಕೆಂದು ಆರೋಗ್ಯ ಇಲಾಖೆ ಜಿಲ್ಲಾ ಕೀಟಶಾಸ್ತ್ರಜ್ಞ ಚಾಮರಾಜ ದೊಡ್ಡಮನಿ ಮನವಿ ಮಾಡಿದ್ದಾರೆ.