Advertisement

ಕೋವಿಡ್ ನಿಯಂತ್ರಣ ನಂತರವೇ ಶಾಲೆ-ಕಾಲೇಜು ಪ್ರಾರಂಭಿಸಿ

11:53 AM Jun 08, 2020 | Naveen |

ಕಲಬುರಗಿ: ಕೋವಿಡ್ ಸೋಂಕು ಸಂಪೂರ್ಣ ನಿಯಂತ್ರಣವಾದ ನಂತರವೇ ಶಾಲೆ-ಕಾಲೇಜುಗಳನ್ನು ಪ್ರಾರಂಭಿಸಬೇಕೆಂದು ಕಲ್ಯಾಣ ಕರ್ನಾಟಕ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ರವಿವಾರ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶಕುಮಾರ ಅವರಿಗೆ ಮನವಿ ಮಾಡಲಾಯಿತು.

Advertisement

ಕೋವಿಡ್ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗಿ ಹರಡುತ್ತಿದ್ದು, ಅದರಲ್ಲೂ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಶಾಲೆ-ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ಮಾಡುತ್ತಿರುವುದನ್ನು ಕೈಬಿಡಬೇಕೆಂದು ಒಕ್ಕೂಟವು ಮನವಿ ಮಾಡಿದೆ. ಶಾಲೆ-ಕಾಲೇಜುಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮನಬಂದಂತೆ ಡೋನೆಷನ್‌ ಹಾವಳಿ ನಿರಂತರವಾಗಿ ನಡೆಯುತ್ತಿದೆ. ಆದ್ದರಿಂದ ಸದ್ಯದ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರು ಆರ್ಥಿಕವಾಗಿ ಸಂಕಷ್ಟ ಪರಿಸ್ಥಿತಿ ಅನುಭವಿಸುತ್ತಿದ್ದಾರೆ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಇಲಾಖೆಯಿಂದ ಸೂಕ್ತ ನಿರ್ದೇಶನ ನೀಡಬೇಕು. ತರಗತಿವಾರು ಸರ್ಕಾರವೇ ಶುಲ್ಕ ನಿಗದಿ ಮಾಡಿ ಆದೇಶ ನೀಡಬೇಕೆಂದು ಒತ್ತಾಯಿಸಿದರು.

ಒಕ್ಕೂಟದ ಮುಖಂಡರಾದ ಸಚಿನ್‌ ಫರತಹಬಾದ್‌, ಮಂಜುನಾಥ ನಾಲವಾರಕರ್‌, ದತ್ತು ಹೈಯ್ನಾಳಕರ್‌, ಮನೋಹರ್‌ ಬಿರನೂರ, ಮುತ್ತಣ್ಣ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next