Advertisement
ದೇಶದ ಹೆಸರಾಂತ ಸುಮಾರು 1200ಕ್ಕೂ ಹೆಚ್ಚು ಕುಸ್ತಿಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ವಿವಿಧ ಮೂರು ಅಖಾಡಗಳಲ್ಲಿ 30 ಪ್ರತ್ಯೇಕ ತೂಕಗಳ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. 80 ಲಕ್ಷ ರೂ. ಮೌಲ್ಯದ ನಗದು ಬಹುಮಾನ, ಪಾರಿತೋಷಕಗಳನ್ನು ನೀಡಲಾಗುವುದು. ಅಜರ್‌ಬೈಜಾನ್, ಜಾರ್ಜಿಯಾ,ಇರಾನ್ ದೇಶಗಳ ಕುಸ್ತಿಪಟುಗಳ ಜೊತೆಗೆ ಭಾರತದ ಪದ್ಮಶ್ರೀ, ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಒಲಂಪಿಕ್ ಪಂದ್ಯ ವಿಜೇತ್, ಯೋಗೇಶ್ವರ ದತ್, ಪದ್ಮಶ್ರೀ, ಅರ್ಜುನ್ ಪ್ರಶಸ್ತಿ ವಿಜೇತರು ಹಾಗೂ ನಿವೃತ್ತ ಐಜಿಪಿ ಕರ್ತಾರ ಸಿಂಗ್, ಪದ್ಮಶ್ರೀ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಒಲಂಪಿಕ್ ಪದಕ ವಿಜೇತ ಸಾಕ್ಷಿ ಮಲಿಕ್, ಅಂತಾರಾಷ್ಟ್ರೀಯ ಕುಸ್ತಿಪಟು ಮಹ್ಮದ್ ಮುರಾಡಿ, ಭಾರತ ಕೇಸರಿ ಉಮೇಶ ಚೌದರಿ, ಅಂತಾರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳಾದ ಅಂಶು ಮಲ್ಲಿಕ್, ಜೈಲಾ ನಾಗೀಜಡೆ, ನೈನಾ, ಸಭೀರಾ ಅಲಿಯೆವಾ ಅಲಹವರ್ಡಿ ಮೊದಲಾದ ಹೆಸರಾಂತ ಕುಸ್ತಿ ಪಟುಗಳು ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ.
Related Articles
ವಿಭಾಗದಲ್ಲಿ ಅಂತಿಮವಾಗಿ ವಿಜೇತರಾಗುವ ಕುಸ್ತಿಪಟುಗಳಿಗೆ “ಕರ್ನಾಟಕ ಬಾಲ ಕೇಸರಿ’ ಪ್ರಶಸ್ತಿ ನೀಡಲಾಗುವುದು. 17 ವರ್ಷದೊಳಗಿನ ಬಾಲಕರ 60 ಕೆ.ಜಿ. ಮತ್ತು ಬಾಲಕಿಯರ 53 ಕೆ.ಜಿ ವಿಭಾಗದಲ್ಲಿ ಅಂತಿಮವಾಗಿ ವಿಜೇತರಾಗುವ ಕುಸ್ತಿಪಟುಗಳಿಗೆ “ಕರ್ನಾಟಕ ಕಿಶೋರ
ಮತ್ತು ಕಿಶೋರಿ’ ಪ್ರಶಸ್ತಿ ನೀಡಲಾಗುವುದು. ಹಿರಿಯರ ವಿಭಾಗದಲ್ಲಿ “ಕರ್ನಾಟಕ ಕೇಸರಿ ಪ್ರಶಸ್ತಿಗಾಗಿ 86 ಕೆ.ಜಿಯಿಂದ 125 ಕೆ.ಜಿ ವರೆಗಿನ ಪುರುಷ ಕುಸ್ತಿಪಟುಗಳು ಭಾಗವಹಿಸಬಹುದು. ಮಹಿಳಾ ಕರ್ನಾಟಕ ಕೇಸರಿ ಪ್ರಶಸ್ತಿಗಾಗಿ 59 ಕೆ.ಜಿಯಿಂದ 76 ಕೆ.ಜಿ ತೂಕದ ವರೆಗಿನ ಮಹಿಳೆಯರು ಭಾಗವಹಿಸಬಹುದು.
Advertisement
ಕರ್ನಾಟಕ ಕೇಸರಿ ವಿಭಾಗದಲ್ಲಿ ಭಾಗವಹಿಸುವ ಪುರುಷ ಮತ್ತು ಮಹಿಳಾ ಕುಸ್ತಿಪಟುಗಳು ಇತರೆ ತೂಕದ ವಿಭಾಗಗಳಲ್ಲಿ ಭಾಗವಹಿಸುವಂತಿಲ್ಲ. ಭಾಗವಹಿಸುವ ಕುಸ್ತಿಪಟುಗಳಿಗೆ ಪ್ರಯಾಣ ಭತ್ಯೆ ಹಾಗೂ ವಸತಿ ಊಟೋಪಹಾರ ವ್ಯವಸ್ಥೆ ಮಾಡಲಾಗಿದೆ. ಕುಸ್ತಿ ಪಂದ್ಯದ ಸಮಯದಲ್ಲಿ ಗೈರು ಹಾಜರಾಗುವ ಕುಸ್ತಿಪಟುಗಳಿಗೆ ಕರ್ನಾಟಕ ಕುಸ್ತಿ ಹಬ್ಬದ ಯಾವುದೇ ಸವಲತ್ತುಗಳನ್ನು ನೀಡಲಾಗುವುದಿಲ್ಲ. ಭಾಗವಹಿಸುವ ಕುಸ್ತಿಪಟುಗಳ ಉದ್ದೀಪನಾ ಮದ್ದು ಪರೀಕ್ಷೆಯನ್ನು ನಾಡಾ ಪರೀಕ್ಷಾ ತಂಡದಿಂದ ನಡೆಸಲಾಗುವುದು. ಪರೀಕ್ಷೆಯಲ್ಲಿ ಉದ್ದೀಪನಾ ಮದ್ದು ಸೇವನೆ ರುಜುವಾತಾದಲ್ಲಿ ನಾಲ್ಕು ವರ್ಷಗಳ ಅವಧಿಗೆ ಸ್ಪರ್ಧೆ, ಆಯ್ಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗುವುದು. ಕುಸ್ತಿ ಪ್ರಾರಂಭದ ಪ್ರಥಮ ಸುತ್ತಿನಿಂದಲೇ ನಾಡಾದವರು ಉದ್ದಿಪನ ಮದ್ದು ಪರೀಕ್ಷೆ ನಡೆಸುವರು. ಆರು ಪ್ರಶಸ್ತಿಗಳ (ಟೈಟಲನ್) ವಿಜೇತ ಪೈಲ್ವಾನರ ನಗದು ಬಹುಮಾನ ಮತ್ತು ಬೆಳ್ಳಿಗದೆಯನ್ನು ನಾಡಾದಿಂದ ಉದ್ದೀಪನಾ ಮದ್ದು ಪರೀಕ್ಷೆ ವರದಿ ಬಂದಮೇಲೆ ಕುಸ್ತಿಪಟುಗಳ ಖಾತೆಗೆ ಜಮಾ ಮಾಡಲಾಗುವುದು.
ಸರ್ಕಾರಿ ಸೇವೆಯಲ್ಲಿರುವ ಕರ್ನಾಟಕ ರಾಜ್ಯದ ಕುಸ್ತಿಪಟುಗಳು ಒಂದು ತೂಕದ ವಿಭಾಗದಲ್ಲಿ ಒಬ್ಬರು ಭಾಗವಹಿಸಬಹುದು. ಕುಸ್ತಿಪಟುಗಳು ಸೇವೆ ಸಲ್ಲಿಸುತ್ತಿರುವ ಇಲಾಖೆಯ ಕ್ರೀಡಾ ಧಿಕಾರಿಯವರಿಂದ ಅಥವಾ ಇಲಾಖೆ ಮುಖ್ಯಸ್ಥರಿಂದ ಸ್ಪರ್ಧೆಯಲ್ಲಿ ಭಾಗವಹಿಸಲು ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು.
ನೋಂದಣಿ: ಫೆ. 22ರಂದು ಬೆಳಗ್ಗೆ 8ರಿಂದ ಮಧ್ಯಾಹ್ನ 12ರ ವರೆಗೆ ಕರ್ನಾಟಕ ಕಾಲೇಜು ಮೈದಾನದಲ್ಲಿ ಕುಸ್ತಿಪಟುಗಳ ದೇಹದ ತೂಕ ತೆಗೆದುಕೊಳ್ಳಲಾಗುವುದು. ವಯೋಮಿತಿಯಲ್ಲಿ ಭಾಗವಹಿಸುವ ಕುಸ್ತಿಪಟುಗಳು ಜನನ ನೋಂದಣಿ ಅಧಿಕಾರಿಗಳಿಂದ ಜನನ ಪ್ರಮಾಣ ಪತ್ರ, ಆಧಾರಕಾರ್ಡ್, ನಾಲ್ಕು ಪಾಸ್‌ಪೋರ್ಟ್ ಅಳತೆ ಭಾವಚಿತ್ರಗಳನ್ನು ಹಾಗೂ ಬ್ಯಾಂಕ್ ಖಾತೆಯ ಪ್ರತಿಯನ್ನು ತರಬೇಕು.
ಸಾರಿಗೆ ವ್ಯವಸ್ಥೆ: ಫೆ. 22 ಬೆಳಗ್ಗೆ 7ರಿಂದ ಮಧ್ಯಾಹ್ನ 12ರ ವರೆಗೆ ಧಾರವಾಡದ ಕೇಂದ್ರೀಯ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣ ಕರ್ನಾಟಕ ಕಾಲೇಜು ಮೈದಾನದ ವರೆಗೆ ಕುಸ್ತಿಪಟುಗಳ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ 94485 90935, 9964245769, 7892042714, 9481966245 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು.