Advertisement

ಕಲಬುರಗಿ: PFI ಜಿಲ್ಲಾಧ್ಯಕ್ಷನ ಮನೆ ಮೇಲೆ ಎನ್ ಐಎ ದಾಳಿ, ದಾಖಲೆ ಪತ್ರ, ಲಕ್ಷಾಂತರ ಹಣ ಪತ್ತೆ

01:09 PM Sep 22, 2022 | Team Udayavani |

ಕಲಬುರಗಿ: ನಗರದಲ್ಲಿ ಬೆಳಗ್ಗೆ ಎನ್ ಐಎ ಅಧಿಕಾರಿಗಳು ಪಿಎಫ್ ಐ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಸಮಿತಿ ಸದಸ್ಯನ ಮನೆಯ ಮೇಲೆ ದಾಳಿ ಮಾಡಿ ಅಗತ್ಯ ದಾಖಲೆ ಪತ್ರ, ನಗದು ಮತ್ತು ಓರ್ವನನ್ನು ವಶ ಪಡಿಸಿಕೊಂಡಿರುವ ಘಟನೆ ಗುರುವಾರ ನಡೆದಿದೆ.

Advertisement

ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆದಿರುವ ವ್ಯಕ್ತಿಯನ್ನು ಶೇಖ್ ಎಜಾಜ್ ಅಲಿ ಎಂದು ಗುರುತಿಸಲಾಗಿದೆ. ಈತ ಕಲಬುರಗಿಯ ಪಿಎಫ್ ಐ ಅಧ್ಯಕ್ಷ. ಟಿಪ್ಪು ಸುಲ್ತಾನ ಚೌಕ್ ನಲ್ಲಿರುವ ಈತನ ಮನೆಯಿಂದ ಸಂಘಟನೆಯ ದಾಖಲೆ, ಕರಪತ್ರಗಳು ಹಾಗೂ 15 ಲಕ್ಷ ರೂ. ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಗೊತ್ತಾಗಿದೆ.

ಅಲ್ಲದೆ ಸಂಘಟನೆಯ ರಾಜ್ಯ ಸಮಿತಿ ಸದಸ್ಯ ಶಾಹೀದ್ ನಾಸೀರ್ ಮನೆ ಮೇಲೂ ದಾಳಿ ಮಾಡಲಾಗಿದೆ. ನಾಸೀರ್ ಪರಾರಿಯಾಗಿದ್ದು. ಈತನಿಗಾಗಿ ತನಿಖೆ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಪ್ರತಿಭಟನೆ :
ವಿಷಯ ತಿಳಿಯುತ್ತಿದ್ದಂತೆ ನೂರಾರು ಜನರು ಎಜಾಜ್ ಮನೆ ಮುಂದೆ ಜಮಾವಣೆಗೊಂಡು ಪ್ರತಿಭಟನೆ ಮಾಡುತ್ತಿದ್ದಾರೆ.

ಕೇಂದ್ರ ಸರಕಾರ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಒಂದು ನಿರ್ಧಿಷ್ಟ ಸಮುದಾಯದ ವಿರುದ್ದ ಸುಖಾಸುಮ್ಮನೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಇದನ್ನೂ ಓದಿ : ಸಾವಿನಲ್ಲೂ ಸಾರ್ಥಕತೆ : ಮೆದುಳು ನಿಷ್ಕ್ರಿಯಗೊಂಡ ಯುವತಿಯ ಹೃದಯ ಬೆಂಗಳೂರಿಗೆ ರವಾನೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next