ಕಲಬುರಗಿ: ಸೇಡಂ ಕೋಲಿ ಕಬ್ಬಲಿಗ ಸಮಾಜದ ತಾಲೂಕು ಘಟಕದ ಗೌರವ ಅಧ್ಯಕ್ಷ ಮಲ್ಲಿಕಾರ್ಜುನ ಮುತ್ಯಾಲ (65) ಅವರನ್ನು ಬೆಳಿಗ್ಗೆ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ.
ರಾತ್ರಿ ಅವರ ಮಾಲಿಕತ್ವದ ವಿಷ್ಣು ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಮಲಗುತ್ತಿದ್ದರು. ಬೆಳಗ್ಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿಡಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಕೊಲೆಯಾದ ಮಲ್ಲಿಕಾರ್ಜುನ ಜೆಡಿಎಸ್ ಪಕ್ಷದಲ್ಲಿದ್ದರು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವವರಿದ್ದರು. ಸೋಮವಾರ ನಡೆದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸ್ಥಳಕ್ಕೆ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಶಿವಕುಮಾರ ಪಾಟೀಲ ತೇಲ್ಕೂರ, ಸಿಪಿಐ ಆನಂದರಾವ್, ಪಿಎಸ್ಐ ಸೋಮಲಿಂಗ ಒಡೆಯರ್ ಭೇಟಿ ನೀಡಿದ್ದಾರೆ.
Related Articles
ಇದನ್ನೂ ಓದಿ : “ನಾನು ನಟನಾಗಿ ಕೆಲಸ ಮಾಡುವುದಿಲ್ಲ.. : ಅಭಿಮಾನಿಗಳಿಗೆ ಶಾಕ್ ಕೊಟ್ಟ ಆಮಿರ್ ಖಾನ್ ಹೇಳಿಕೆ