Advertisement

ಕಂಟೈನ್‌ಮೆಂಟ್‌ ನಿವಾಸಿಗಳ ಸಹಕಾರ ಅವಶ್ಯ

06:05 PM May 02, 2020 | Naveen |

ಕಲಬುರಗಿ: ಕೋವಿಡ್ ಸೋಂಕು ಪತ್ತೆಯಾದ ನಗರದ ಕಂಟೈನ್‌ ಮೆಂಟ್‌ ಝೋನ್‌ಗಳಿಗೆ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್‌ ಫಾತಿಮಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್‌ ಮೋಹನ್‌ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಮೋಮಿನ್‌ ಪುರದ ಸ್ಥಳೀಯ ಜನರೊಂದಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್‌ ಮೋಹನ್‌ ಸಮಾಲೋಚನೆ ನಡೆಸಿ, ಕೋವಿಡ್ ಸೋಂಕು ಕುರಿತು ಯಾರೂ ಆತಂಕಕ್ಕೆ ಒಳಗಾಗಬಾರದು. ಊಹಾ ಪೋಹಗಳಿಗೆ ಆಸ್ಪದ ಕೊಡಬಾರದು. ಎಲ್ಲರೂ ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕೆಂದು ನಿವಾಸಿಗಳಿಗೆ ಸಲಹೆ ನೀಡಿದರು. ಸೋಂಕಿತರ ಸಂಪರ್ಕಕ್ಕೆ ಬಂದ ಪ್ರೈಮರಿ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್ ವ್ಯಕ್ತಿಗಳಿಗೆ ಆರೋಗ್ಯದ ದೃಷ್ಟಿಯಿಂದ ಕ್ವಾರಂಟೈನ್‌ ಮಾಡಲಾಗುತ್ತದೆ ಎಂದು ಹೇಳಿದರು.

ಆಸ್ಪತ್ರೆಯಲ್ಲಿ ದಾಖಲಾಗಿರುವ ಕೊರೊನಾ ಸೋಂಕಿತ ರೋಗಿಗಳಿಗೆ ಮನೆಯಿಂದ ಊಟ-ಉಪಹಾರ ನೀಡಬಹುದೆಂದು ತಿಳಿಸಿದರು. ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ, ಪೊಲೀಸ್‌ ಆಯುಕ್ತ ಸತೀಶಕುಮಾರ, ಉಪ ಪೊಲೀಸ್‌ ಆಯುಕ್ತ ಕಿಶೋರ್‌ ಬಾಬು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next