Advertisement
ಪತ್ರಿಕಾ ಭವನದಲ್ಲಿ ಮಂಗಳವಾರ ಜಿಲ್ಲಾ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
Advertisement
ಕಲಬುರಗಿ, ರಾಯಚೂರು, ಬೀದರ್, ಯಾದಗಿರಿ, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಸಮಸ್ಯೆಗಳು ಒಂದೊಂದು ರೀತಿಯಲ್ಲಿವೆ. ಎಲ್ಲ ಜಿಲ್ಲೆಗಳಲ್ಲಿ ಒಂದೇ ನೀತಿ ಅನುಸರಿಸಿದರೆ, ಅದು ಅನುಷ್ಠಾನಗೊಳ್ಳುವುದು ಕಷ್ಟ ಸಾಧ್ಯವಾಗಲಿದೆ. ಇಲ್ಲಿನ ಜನತೆ ಮೊದಲು ಶಿಕ್ಷಿತರಾಗಬೇಕಿದೆ. ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಚರಂಡಿ, ಕಟ್ಟಡ ನಿರ್ಮಾಣವಲ್ಲ. ಆದರೆ, ಇಲ್ಲಿನ ಜನಪ್ರತಿನಿಧಿಗಳು ಅಭಿವೃದ್ಧಿಯೆಂದು ಜನತೆಗೆ ತೋರಿಸಲು ರಸ್ತೆ, ಚರಂಡಿ, ಕಟ್ಟಡ ನಿರ್ಮಾಣಕ್ಕೆ ಮುತುವರ್ಜಿ ತೋರಿಸುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಅಭಿವೃದ್ಧಿಗೆ ಬುನಾದಿಯೇ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ. ಈ ನಿಟ್ಟಿನಲ್ಲಿ ಎಚ್ಕೆಆರ್‌ಡಿಬಿ ಕಾರ್ಯ ಯೋಜನೆಗಳನ್ನು ಹಾಕಿಕೊಂಡು ಹೈ.ಕ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಜತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಅಪೌಷ್ಟಿಕತೆ ನಿವಾರಣೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾಮಗಾರಿಗಳಿಗೆ ಕಾಲಮಿತಿ: ಎಚ್ಕೆಆರ್‌ಡಿಬಿಯಿಂದ ಕೈಗೊಳ್ಳುತ್ತಿರುವ ಎಲ್ಲ ಕಾಮಗಾರಿಗಳಿಗೆ ನಿರ್ದಿಷ್ಟ ಕಾಲಮಿತಿ ಹಾಕಿಕೊಳ್ಳಲಾಗಿದೆ. ವ್ಯವಸ್ಥಿತ ರೀತಿಯಲ್ಲಿ ಅನುಷ್ಠಾನ ಮಾಡಲು ಕ್ರಮ ಜರುಗಿಸಲಾಗುತ್ತಿದೆ. 30 ಲಕ್ಷ ರೂ. ಮೊತ್ತದೊಳಗಿನ ಕಾಮಗಾರಿ ಆರಂಭಕ್ಕೆ ಮೂರು ತಿಂಗಳು, 30ಲಕ್ಷದಿಂದ ಒಂದು ಕೋಟಿ ರೂ. ವೆಚ್ಚದ ಕಾಮಗಾರಿಗೆ ಐದು ತಿಂಗಳು ಮತ್ತು ಒಂದು ಕೋಟಿ ರೂ.ಗೂ ಅಧಿಕ ವೆಚ್ಚದ ಕಾಮಗಾರಿ ಆರಂಭಕ್ಕೆ ಆರು ತಿಂಗಳ ಕಾಲಮಿತಿ ವಿಧಿಸಲಾಗಿದೆ ಎಂದು ಹೇಳಿದರು.
ಕಾಲಮಿತಿ ವಿಧಿಸಿದ್ದರಿಂದ ಪ್ರತಿದಿನವೂ ಕಾಮಗಾರಿ ಸ್ಥಿತಿ, ಅಂದು ಖರ್ಚಾದ ಅನುದಾನ ಬಗ್ಗೆ ಮಾಹಿತಿ ಅಂದೇ ಸಿಗುವ ರೀತಿಯಲ್ಲಿ ಕಾರ್ಯ ವೈಖರಿಯನ್ನು ಬದಲಾವಣೆ ಮಾಡಿಕೊಳ್ಳಲಾಗಿದೆ. ಅಲ್ಲದೇ, ಸರ್ಕಾರದಿಂದ ನೀಡಿದ ಅನೇಕ ಸೌಕರ್ಯ, ಸಲಕರಣೆಗಳು ಉಪಯೋಗವಾಗುತ್ತಿರುವ ಬಗ್ಗೆ ನಿರಂತರವಾಗಿ ನಿಗಾ ವಹಿಸಲಾಗುತ್ತಿದೆ ಎಂದು ವಿವರಿಸಿದರು.
ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಸಿದ್ಧೇಶ್ವರಪ್ಪ, ಸಂಪಾದಕರ ಸಂಘದ ಅಧ್ಯಕ್ಷ ಶರಣಬಸಪ್ಪ ಕೆ.ಎಚ್., ಪತ್ರಕರ್ತರಾದ ಪಿ.ಎಂ. ಮಣ್ಣೂರು, ಶಂಕರಕೋಡ್ಲಾ, ವೆಂಕಟರಾವ್ ಖಮಿತಕರ್, ಆಜೀಮುಲ್ಲಾ ಸರಮಸ್ತ, ವಿ.ಎನ್.ಮಲ್ಲಿಕಾರ್ಜುನ, ಮಲ್ಲಿಕಾರ್ಜುನ ನಾಯ್ಕೋಡಿ ಮತ್ತಿತರರು ಇದ್ದರು.