Advertisement
ಜಿಲ್ಲೆಯ ಏಳು ಕ್ಷೇತ್ರ ಶಿಕ್ಷಣ ವಲಯಗಳ ಪ್ರಾಥಮಿಕ ಶಾಲೆಗಳ ಶಿಕ್ಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕರೆಲ್ಲರೂ ‘ಆಕಸ್ಮಿಕ ರಜೆ’ ಹಾಕಿ ಪ್ರತಿಭಟನಾ ಪ್ರದರ್ಶನದಲ್ಲಿ ಭಾಗವಹಿಸಿದ್ದರಿಂದ ಬಹುಪಾಲು ಶಾಲೆಗಳ ಬಾಗಿಲುಗಳು ಬಂದಾಗಿದ್ದವು. ಶಾಲಾ ಮಕ್ಕಳಿಗೆ ಅಘೋಷಿತ ರಜೆ ಘೋಷಿಸಲಾಗಿತ್ತು. ಕೆಲ ಶಾಲೆಗಳ ಶಿಕ್ಷಕರು ಮಂಗಳವಾರ ಶಾಲೆಗೆ ರಜೆ ಇರುತ್ತದೆ ಎಂದು ಒಂದು ದಿನ ಮುನ್ನವೇ ತಿಳಿಸಿ ಬಂದಿದ್ದರು.
Related Articles
Advertisement
ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ವೇತನ ಶ್ರೇಣಿ ನಿಗದಿಗೊಳಿಸಬೇಕು. ಚುನಾವಣೆಗೆ ಮುನ್ನ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನೂತನ ಪಿಂಚಣಿ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಕೂಡಲೇ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಬೇಕೆಂದು ಪ್ರತಿಭಟನಾ ನಿತರ ಶಿಕ್ಷಕರು ಒತ್ತಾಯಿಸಿದರು.
ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಆಗದೇ ಈಗ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ. ಈ ಪ್ರಕ್ರಿಯೆ ಮುಗಿದ ತಕ್ಷಣ ಅಕ್ಟೋಬರ್‌ನಲ್ಲಿ ಮತ್ತೂಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸುವಂತೆ ಆಗ್ರಹಿಸಿದರು.
ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಿ ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕ, ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯೋಪಾಧ್ಯಾಯ, ದೈಹಿಕ ಶಿಕ್ಷಕರನ್ನು ಹೊರತುಪಡಿಸಿ ಹೆಚ್ಚುವರಿ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.
6ನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸಿನ ಪ್ರಕಾರ ಮುಖ್ಯ ಶಿಕ್ಷಕರಿಗೆ 10, 15, 20, 25 ಹಾಗೂ 30 ವರ್ಷಗಳ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪ ನಿರ್ದೇಶಕರ ಹುದ್ದೆಯವರೆಗೂ ಬಡ್ತಿ ನೀಡುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿದರು. ನಂತರದ ಜಿಲ್ಲಾಧಿಕಾರಿಗಳು ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಉಪಾಧ್ಯಕ್ಷ ಪರಮೇಶ್ವರ ದೇಸಾಯಿ, ಪ್ರಧಾನ ಕಾರ್ಯದರ್ಶಿ ಸಿದ್ದರಾಮ, ಶಿವಕುಮಾರ ಬಿರಾದಾರ, ಬಾಬು ಪೊನ್ನ ನಾಯಕ, ಅಂಬುಬಾಯಿ ಕಲಶೆಟ್ಟಿ, ಮಲ್ಲಣ್ಣ ಮೇತ್ರಿ, ಚನ್ನಮ್ಮ ಗೊಬ್ಬೂರಕರ, ಮರೆಪ್ಪ ಮೂಲಿಮನಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.