ಕಲಬುರಗಿ: ರೈತರು ಬೆಳೆದ ತರಕಾರಿ ಹಾಗೂ ಹಣ್ಣು- ಹಂಪಲುಗಳನ್ನು ಮಾರುಕಟ್ಟೆಗೆ ಸರಬರಾಜು ಮಾಡುವಲ್ಲಿ ಯಾರಾದರೂ ಅಡ್ಡಿಪಡಿಸಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ನಿಮಿತ್ತ ಲಾಕ್ ಡೌನ್ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಕೈಗೊಂಡಿರುವ ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಬಿತ್ತನೆ ಬೀಜ, ಗೊಬ್ಬರ ಪೂರೈಸುವ ನಿಟ್ಟಿನಲ್ಲಿ ಕ್ರಮಗಳನ್ನು ಇಲಾಖಾಧಿಕಾರಿಗಳು ಕೈಗೊಳ್ಳಬೇಕು. ತೋಟಗಾರಿಕೆ ಬೆಳೆಗಳ ಮಾರಾಟಕ್ಕಾಗಿ ವಿಶೇಷ ಅಂಗಡಿಗಳನ್ನು ತೆರೆಯಲು ಮುಂದಾಗಬೇಕು. ಶಿಥಲೀಕರಣದಲ್ಲಿ ರೈತರು ತಮ್ಮ ಹಣ್ಣುಗಳನ್ನು ಇಡಲು ಯಾವುದೇ ಶುಲ್ಕವಿಲ್ಲ ಎಂದು ತಿಳಿಸಿದರು.
ಸಂಸದ ಡಾ| ಉಮೇಶ ಜಾಧವ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಎಂ.ವೈ. ಪಾಟೀಲ, ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಖನೀಜ್ ಫಾತೀಮಾ, ಡಾ| ಅವಿನಾಶ ಜಾಧವ, ಜಿ.ಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ಶರತ್ ಬಿ, ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ್ ಸೂಗುರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂತೋಷ, ಜಿ.ಪಂ ಕೃಷಿ ಮತ್ತು
ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ ಮುಂತಾದವರಿದ್ದರು.