Advertisement

4ರಿಂದ ಪಿಯು ಪರೀಕ್ಷೆ: ಸುಸೂತ್ರವಾಗಿ ನಡೆಸಲು ವಣಕ್ಯಾಳ ಸೂಚನೆ

12:09 PM Mar 01, 2020 | Naveen |

ಕಲಬುರಗಿ: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ. 4ರಿಂದ 23ರ ವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸುಸೂತ್ರವಾಗಿ ಪರೀಕ್ಷೆ ನಡೆಯಲು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಶಂಕರ ವಣಿಕ್ಯಾಳ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳು, ರೂಟ್‌ ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲಬುರಗಿ ನಗರದ 25 ಕೇಂದ್ರ, ತಾಲೂಕಾ ಹಂತದಲ್ಲಿನ 22 ಕೇಂದ್ರಗಳು ಸೇರಿದಂತೆ ಒಟ್ಟು 47 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

15067 ಪುರುಷ ವಿದ್ಯಾರ್ಥಿಗಳು, 14348 ಮಹಿಳಾ ವಿದ್ಯಾರ್ಥಿನಿಯರು ಸೇರಿ 29415 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದರಲ್ಲಿ 22755 ಫ್ರೆಶರ್, 5348 ರಿಪೀಟರ್ಮ ತ್ತು 1312 ಖಾಸಗಿ ವಿದ್ಯಾರ್ಥಿಗಳು ಸೇರಿದ್ದಾರೆ. ಪರೀಕ್ಷೆ ಸುಗಮವಾಗಿ ನಡೆಯುವಂತೆ 47 ಕೇಂದ್ರಗಳಿಗೂ ಮುಖ್ಯ ಅಧೀಕ್ಷಕರನ್ನು ನೇಮಿಸಿದೆ.

ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗಲು ಕ್ಷೇತ್ರ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಮೂರು ಜನರ 13 ರೂಟ್‌ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಈ ವಾಹನಕ್ಕೆ ಜಿ.ಪಿ.ಆರ್‌.ಎಸ್‌ ಅಳವಡಿಸಲಾಗಿದೆ. ಜಿಲ್ಲೆಯ ಎಲ್ಲ ಪರೀಕ್ಷಾ  ಕೇಂದ್ರದಲ್ಲಿ ಸಿ.ಸಿ.ಟಿ.ವಿ ಅಳವಡಿಸಲಾಗಿದೆ ಎಂದು ವಿವರಿಸಿದರು.

ಪರೀಕ್ಷಾ ಕೇಂದ್ರದ ಅ ಧೀಕ್ಷಕರು ಕೇಂದ್ರದಲ್ಲಿಯೇ ಹಾಜರಿದ್ದು, ಪಿಯುಸಿ ಮಂಡಳಿ ನಿರ್ದೇಶನದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರದ ಅಧೀಕ್ಷಕರಿಗೆ ಸೂಚನೆ ನೀಡಿದ ಅವರು, ಪರೀಕ್ಷೆ ಆರಂಭಗೊಳ್ಳುವ ಮುನ್ನ ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ, ಮೇಜು, ಬೆಳಕಿನ ವ್ಯವಸ್ಥೆ ಬಗ್ಗೆ ಅಧೀಕ್ಷಕರು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು.

Advertisement

ಪರೀಕ್ಷೆ ದಿನದಂದು ಕೇಂದ್ರದ ಪ್ರವೇಶ ಸ್ಥಳದಲ್ಲಿಯೇ ಪುರುಷ ಮತ್ತು ಮಹಿಳಾ ಸಿಬ್ಬಂದಿಯಿಂದ ಪ್ರತ್ಯೇಕವಾಗಿ ವಿದ್ಯಾರ್ಥಿಗಳನ್ನು ಫ್ರಿಸ್ಕಿಂಗ್‌ ಮಾಡಿಯೇ ಒಳಗೆ ಬಿಡಬೇಕು. ಪೊಲೀಸ್‌ ಬಂದೋಬಸ್ತ್ಗಾಗಿ ಎಸ್‌ಪಿಗೆ ನಿರ್ದೇಶನ ನೀಡಲಾಗುವುದು ಎಂದರು.

ಅನಧಿಕೃತ ವ್ಯಕ್ತಿಗೆ ಪ್ರವೇಶ ನಿರ್ಬಂಧ: ಪರೀಕ್ಷೆಗೆ ಸಂಬಂಧವಿಲ್ಲದ ವ್ಯಕ್ತಿಯನ್ನು ಪರೀಕ್ಷಾ ಕೇಂದ್ರದ ಆವರಣದಲ್ಲಿ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಮೊಬೈಲ್‌ ನಿಷೇಧ: ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಅಭ್ಯರ್ಥಿಗಳು ಮೊಬೈಲ್‌, ಪೇಜರ್‌, ಬ್ಲ್ಯೂಟೂತ್‌, ವೈರಲೆಸ್‌ ಸೆಟ್‌, ಲ್ಯಾಪ್‌ಟಾಪ್‌, ಸ್ಲೆ„ಡರೂಲ್‌ ಕ್ಯಾಲ್ಕುಲೇಟರ್‌, ವಾಚ್‌ ಕ್ಯಾಲ್ಕುಲೇಟರ್‌, ಪಠ್ಯ ಪುಸ್ತಕ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ಸ್‌ ಉಪಕರಣ ತರುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ನಕಲು ಮಾಡುವ ಅಭ್ಯರ್ಥಿಗಳು ಮತ್ತು ಅದಕ್ಕೆ ಸಹಕರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವಶರಣಪ್ಪ ಮೂಳೆಗಾಂವ ಮಾತನಾಡಿ, ಪರೀಕ್ಷೆಗೆ ಎಲ್ಲ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳ ಆಡಳಿತ ಮಂಡಳಿ ಸಹಕಾರ ನೀಡಬೇಕು ಎಂದರು. ಡಿವೈಎಸ್‌ಪಿ ಜೇಮ್ಸ್‌ ಮಿನೇಜಸ್‌, ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು ಇದ್ದರು.

4 ಸೂಕ್ಷ್ಮ ಪರೀಕ್ಷಾ ಕೇಂದ್ರ
ಅಫಜಲಪುರ ಸರ್ಕಾರಿ ಪದವಿ ಪೂರ್ವ ಕಾಲೇಜು, ಕರಜಗಿ, ಮಾದನಹಿಪ್ಪರಗಾ, ಜೇವರ್ಗಿ ತಾಲೂಕಿನ ಸೊನ್ನ ಎಸ್‌ಜಿಎಸ್‌ವಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ. ಇಲ್ಲಿ ಹೆಚ್ಚುವರಿ ಪೊಲೀಸ್‌ ಬಂದೋಬಸ್ತ್ ಇರಲಿದೆ.

ಉಚಿತ ಪ್ರಯಾಣ: ಬೇರೆ ಊರಿಂದ ಬಸ್‌ ಲಕ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳು ತಮಗೆ ನೀಡಲಾದ ಬಸ್‌ ಪಾಸ್‌ ಅವಧಿ ಮುಗಿದರೂ ಹಾಲ್‌ ಟಿಕೆಟ್‌ ಪ್ರದರ್ಶಿಸಿ ಉಚಿತ ಪ್ರಯಾಣ ಮಾಡಬಹುದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next