Advertisement

ಮೌಲಿಕ ಶಿಕ್ಷಣವೇ ಶರಣಬಸವ ವಿವಿ ಧ್ಯೇಯ

10:03 AM Aug 16, 2019 | Team Udayavani |

ಕಲಬುರಗಿ: ಶರಣಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯಲ್ಲಿ ಮೌಲಿಕ ಶಿಕ್ಷಣ ದೊರೆಯುತ್ತಿದ್ದು, ಇದೇ ಪ್ರಮುಖ ಧ್ಯೇಯವಾಗಿದೆ ಎಂದು ಶರಣಬಸವ ವಿವಿ ಕುಲಾಧಿಪತಿ ಹಾಗೂ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಹೆಮ್ಮೆ ವ್ಯಕ್ತಪಡಿಸಿದರು.

Advertisement

ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ಭಾಗದಿಂದ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಮೆಡಿಕಲ್ ಮತ್ತು ಎಂಜಿನಿಯರಿಂಗ್‌ ಪದವಿ ಪ್ರವೇಶ ಪಡೆಯುತ್ತಿರುವುದರಲ್ಲಿ ತಮ್ಮ ಶಿಕ್ಷಣ ಸಂಸ್ಥೆ ಪಾತ್ರ ಪ್ರಮುಖವಾಗಿದೆ ಎಂದರು.

ಶಿಕ್ಷಣ ಸಂಸ್ಥೆ ಯಾವ ರೀತಿ ಅಭಿವೃದ್ಧಿ ಹೊಂದಿದೆಯೋ, ಅದೇ ರೀತಿ ಭಾರತ ದೇಶ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಿದೆ. ಇನ್ನು ಕೆಲವೇ ದಿನಗಳಲ್ಲಿ ನಮ್ಮ ರಾಷ್ಟ್ರ ಬಲಿಷ್ಠ ರಾಷ್ಟ್ರವಾಗುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

ಶರಣಬಸವ ವಿಶ್ವವಿದ್ಯಾಲಯದಲ್ಲಿ ಎಂ.ಎ ಪ್ರವಾಸೋದ್ಯಮ, ಎಂ.ಎ ಪತ್ರಿಕೋದ್ಯಮ ಮತ್ತು ಕಲಾ, ವಾಣಿಜ್ಯ ಸ್ನಾತಕೋತ್ತರ ಕೋರ್ಸ್‌, ತಂತ್ರಜ್ಞಾನದ ಹೊಸ ಹೊಸ ಕೋರ್ಸ್‌ಗಳನ್ನು ಆರಂಭಿಸಿ ಈ ಭಾಗದ ಜನತೆಗೆ ಮೌಲಿಕ, ಗುಣಾತ್ಮಕ ಶಿಕ್ಷಣ ನೀಡುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮಳೆಯಿಂದಾಗಿ ರೈತ ಉತ್ತಮ ಬೆಳೆ ಕಂಡುಕೊಂಡಿರುವುದು ಒಂದು ಕಡೆ ಯಾದರೆ, ಮತ್ತೂಂದೆಡೆ ನೆರೆ ಪ್ರವಾಹಕ್ಕೆ ಸಿಲುಕಿ ಹಲವಾರು ಜಿಲ್ಲೆಯ ಜನರು ಕಷ್ಟದಿಂದ ನಲುಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

Advertisement

ಸಹೋದರಿ ಶಿವಾನಿ ಅಪ್ಪ, ಮಹೇಶ್ವರಿ ಅಪ್ಪ, ಕೋಮಲಾ ಅಪ್ಪ ಮತ್ತು ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಚಿ. ದೊಡ್ಡಪ್ಪ ಅಪ್ಪ ತಮ್ಮನವರು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿವಿ ಸಮ ಕುಲಪತಿ ಡಾ| ವಿ.ಡಿ. ಮೈತ್ರಿ, ಕುಲಸಚಿವ ಡಾ| ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ| ಲಿಂಗರಾಜ ಶಾಸ್ತ್ರೀ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಟಿ.ವಿ. ಶಿವಾನಂದನ್‌, ಶರಣಬಸವೇಶ್ವರ ಕಲಾ ಪದವಿ ವಿದ್ಯಾಲಯದ ಪ್ರಾಧ್ಯಾಪಕ ಡಾ| ಸುರೇಶ ನಂದಗಾಂವ, ಅಪ್ಪಾ ಪಬ್ಲಿಕ್‌ ಶಾಲೆಯ ಪ್ರಾಚಾರ್ಯ ಶಂಕರಗೌಡ ಪಾಟೀಲ ಇದ್ದರು.

ಇದೇ ವೇಳೆ ಶರಣಬಸವ ವಿಶ್ವವಿದ್ಯಾಲಯದ ವತಿಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ವಿಶ್ವವಿದ್ಯಾಲಯ ಕುಲಪತಿ ಡಾ| ನಿರಂಜನ್‌ ನಿಷ್ಠಿ ಧ್ವಜಾರೋಹಣ ನೆರವೇರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next