Advertisement

ಶರಣಬಸವ ವಿವಿ ಸಂಸ್ಥಾಪನಾ ದಿನಾಚರಣೆ

01:31 PM Jul 28, 2019 | Naveen |

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ದ್ವಿತೀಯ ಸಂಸ್ಥಾಪನ ದಿನಾಚರಣೆ ಜುಲೈ 29ರಂದು ಸಂಜೆ 4ಕ್ಕೆ ಸಂಸ್ಥೆಯ ಶತಮಾನೋತ್ಸವ ಸಭಾಂಗಣದಲ್ಲಿ (ಸೆಂಟನೇರಿ ಹಾಲ್)ದಲ್ಲಿ ಹಮ್ಮಿಕೊಳ್ಳಲಾಗಿದೆ.

Advertisement

ಕಲಬುರಗಿ ಲೋಕಸಭಾ ಮತಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದ ಡಾ| ಉಮೇಶ ಜಾಧವ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಕುಲಸಚಿವ ಡಾ| ಅನೀಲಕುಮಾರ ಬಿಡವೆ ತಿಳಿಸಿದ್ದಾರೆ.

ಹೈದ್ರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಇದೆ ವೇಳೆ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಡಾ| ಶರಣಬಸವಪ್ಪ ಅಪ್ಪ ಮತ್ತು ಗಣ್ಯರು ಸನ್ಮಾನಿಸುವರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಾತೋಶ್ರೀ ದಾಕ್ಷಾಯಿಣಿ ಅವ್ವಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿಶ್ವವಿದ್ಯಾಲಯದ ಕುಲಪತಿ ಡಾ| ನಿರಂಜನ್‌ ನಿಷ್ಠಿ, ಸಮ ಕುಲಪತಿ ಪ್ರೊ| ವಿ.ಡಿ. ಮೈತ್ರಿ, ಸಮ ಕುಲಪತಿ ಎನ್‌.ಎಸ್‌. ದೇವರಕಲ್, ವಿವಿ ಕುಲಸಚಿವ ಡಾ| ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ| ಲಿಂಗರಾಜ ಶಾಸ್ತ್ರೀ, ಡೀನ್‌ ಡಾ| ಲಕ್ಷಿ ್ಮೕಪಾಟೀಲ ಹಾಗೂ ವಿಶ್ವವಿದ್ಯಾಲಯದ ವಿವಿಧ ವಿಭಾಗದ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next