ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ್ರೆ 6 ತಿಂಗಳೊಳಗೆ ಕಲಬುರಗಿ ಮಹಾನಗರವನ್ನು ‘ಸ್ಮಾರ್ಟ್ ಸಿಟಿ’ ಮಾಡಲು ಸರ್ವ ಪ್ರಯತ್ನ ಮಾಡುವುದಾಗಿ ಕಳೆದ ವಿಧಾನಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.
Advertisement
2018ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರಕ್ಕೆಂದು ಕಲಬುರಗಿಗೆ ಆಗಮಿಸಿದ್ದಾಗ ಸೂಪರ್ ಮಾರ್ಕೆಟ್ದಲ್ಲಿ ನಡೆದಿದ್ದ ಕಲಬುರಗಿ ದಕ್ಷಿಣ ಹಾಗೂ ಕಲಬುರಗಿ ಉತ್ತರ ಮತಕ್ಷೇತ್ರದ ಚುನಾವಣಾ ಭಾಷಣದಲ್ಲಿ ಯಡಿಯೂರಪ್ಪ ಈ ಭರವಸೆ ನೀಡಿದ್ದರು. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಜತೆಗೆ ಬಿ.ಎಸ್.ಯಡಿಯೂರಪ್ಪ ಅವರೇ ಸಿಎಂ ಆಗಿದ್ದಾರೆ. ಹೀಗಾಗಿ ‘ಸ್ಮಾರ್ಟ್ ಸಿಟಿ’ ಕನಸಿಗೆ ರೆಕ್ಕೆಪುಕ್ಕ ಬಂದಂತಾಗಿದೆ.
Related Articles
Advertisement
ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಎರಡನೇ ಹಂತದಲ್ಲಿ ‘ಸ್ಮಾರ್ಟ ಸಿಟಿ’ ಕಾರ್ಯ ಕೈಗೆತ್ತಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಚಿಂತನೆ ನಡೆಸಿದೆಯಂತೆ. ಎರಡನೆ ಹಂತದಲ್ಲಾದರೂ ಕಲಬುರಗಿ ಮಹಾನಗರ ಈ ಪಟ್ಟಿಯಲ್ಲಿ ಸೇರಬೇಕೆಂದರೆ ಈಗಿನಿಂದಲೇ ತಾಲಿಮು ನಡೆಸಬೇಕು. ಅಲ್ಲದೇ ರಾಜ್ಯ ಸರ್ಕಾರವೂ ಮೇಲ್ಸೇತುವೆ, ನಗರ ಸಂಚಾರ ಸುಧಾರಣೆಗೆ ಅಮೂಲಾಗ್ರ ಬದಲಾವಣೆ, ತ್ಯಾಜ್ಯ ನಿರ್ವಹಣೆಗೆ ಆಧುನಿಕ ಕ್ರಮ, ಸಾರಿಗೆ ವ್ಯವಸ್ಥೆ ಸೇರಿದಂತೆ ಇತರ ಕಾರ್ಯಗಳಿಗೆ ನೂರಾರು ಕೋಟಿ ರೂ. ಅನುದಾನ ನೀಡಿದರೆ ‘ಸ್ಮಾರ್ಟ ಸಿಟಿ’ ಆಗುವುದರಲ್ಲಿ ಅನುಮಾನವೇ ಇಲ್ಲ.
ಈಗಷ್ಟೇ ಕಲಬುರಗಿ ಮಹಾನಗರಕ್ಕೆ ಪೊಲೀಸ್ ಆಯುಕ್ತಾಲಯ ಕಾರ್ಯರಂಭ ಆಗಿದೆ. ಪಾಲಿಕೆಯಲ್ಲಿ ತುರ್ತಾಗಿ ಖಾಲಿ ಹುದ್ದೆ ಭರ್ತಿಗೆ ಕ್ರಮ, ಅದರಲ್ಲೂ ಪಾಲಿಕೆಗೆ ಚುನಾವಣೆ ನಡೆಸಿ ಹೊಸ ಚುನಾಯಿತ ಮಂಡಳಿ ಬರುವುದು ಮುಖ್ಯವಾಗಿದೆ. ಒಟ್ಟಾರೆ ಮಹಾನಗರ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರ, ಅದರಲ್ಲೂ ಮುಖ್ಯಮಂತ್ರಿ ಯಡಿಯೂರಪ್ಪ ಗಮನಹರಿಸಬೇಕು. ಇಲ್ಲದಿದ್ದರೆ ಯಥಾಸ್ಥಿತಿಯಲ್ಲೇ ಮುಂದುವರಿಯುತ್ತದೆ ಎನ್ನುವುದರಲ್ಲಿ ಯಾವುದೇ ಅನುಮಾನ ಇಲ್ಲ.
ನಗರಾಭಿವೃದ್ಧಿ ಖಾತೆ ಸಿಎಂ ಯಡಿಯೂರಪ್ಪ ಬಳಿಯೇ ಇದೆ. ಹೀಗಾಗಿ ಕಲಬುರಗಿ ಮಹಾನಗರ ‘ಸ್ಮಾರ್ಟ್ ಸಿಟಿ’ ಆಗುವ ನಿಟ್ಟಿನಲ್ಲಿ ಅಭಿವೃದ್ಧಿ ಮಾಡುವಂತೆ ಮನವಿ ಮಾಡಲಾಗಿದೆ. ಸೆಪ್ಟೆಂಬರ್ 7ರಂದು ಕಲಬುರಗಿ ಪಾಲಿಕೆಗೆ ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆ ಅಡಿ 2019-20ರಿಂದ 2023-2024ರ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ 150 ಕೋಟಿ ರೂ.ಗಳನ್ನು ಸಿಎಂ ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಕಲಬುರಗಿ ಮಹಾನಗರ ಜನತೆ ವತಿಯಿಂದ ಅಭಿನಂದನೆ ಸಲ್ಲಿಸುವೆ.• ದತ್ತಾತ್ರೇಯ ಪಾಟೀಲ ರೇವೂರ,
ಶಾಸಕರು, ಕಲಬುರಗಿ ದಕ್ಷಿಣ ಕಲಬುರಗಿ ಪಾಲಿಕೆಗೆ150 ಕೋಟಿ ರೂ.
ಈ ಹಿಂದೆ ಸಿಎಂ ಆಗಿದ್ದಾಗ ಕಲಬುರಗಿ ಪಾಲಿಕೆಗೆ 200 ಕೋಟಿ ರೂ. ವಿಶೇಷ ಅನುದಾನ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಈಗ ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆಯಡಿ ಕಲಬುರಗಿ ಪಾಲಿಕೆಗೆ 150 ಕೋಟಿ ರೂ. ಮಂಜೂರಾತಿ ನೀಡಿದ್ದಾರೆ. ಈ ಅನುದಾನವನ್ನು ಎಲ್ಲ ಹಂತದ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಬಹುದು. ಹಣ ಬಿಡುಗಡೆಗೆ ಆಡಳಿತಾತ್ಮಕವಾಗಿ ಅನುಮೋದನೆ ದೊರೆತಿದೆ.