Advertisement

ಮನೆ ಬಾಗಿಲಿಗೆ ತಾಜಾ ಹಣ್ಣು ಪೂರೈಕೆ

05:27 PM Apr 29, 2020 | Naveen |

ಕಲಬುರಗಿ: ಕೊರೊನಾ ಹಿನ್ನೆಲೆಯಲ್ಲಿ ಜನಸಂದಣಿ ನಿಯಂತ್ರಿಸುವುದರ ಜೊತೆಗೆ ಬೇಸಿಗೆ ಸಮಯ ಇದಾಗಿರುವುದರಿಂದ ರೈತರಿಂದ ನೇರವಾಗಿ ಖರೀದಿಸಿದ ತಾಜಾ ಕಲ್ಲಂಗಡಿ, ದ್ರಾಕ್ಷಿ, ಮೋಸಂಬಿ ಹಣ್ಣುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿದೆ.

Advertisement

ಕಮಲಾಪುರ ಗ್ರಾಮೀಣ ತೋಟಗಾರಿಕೆ ರೈತ ಉತ್ಪಾದಕರ ಸಂಘ, ಕಲಬುರಗಿ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದೊಂದಿಗೆ ತೋಟಗಾರಿಕೆ ಇಲಾಖೆಯು ನಗರದ ನಿವಾಸಿಗಳಿಗೆ ಅನುಕೂಲವಾಗುವಂತೆ ಜಿಲ್ಲೆಯ ರೈತರಿಂದ ನೇರವಾಗಿ ಹಣ್ಣುಗಳನ್ನು ಖರೀದಿಸಿ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುತ್ತಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಂತೋಷ ಸಪ್ಪಂಡಿ ಹಾಗೂ ಹಿರಿಯ ಸಹಾಯಕ ನಿರ್ದೇಶಕ ಶಂಕರ ಪಟವಾದಿ ತಿಳಿಸಿದ್ದಾರೆ.

ಗ್ರಾಹಕರ ಮನೆ ಬಾಗಿಲಿಗೆ ಹಣ್ಣು ತಲುಪಿಸಲು ಅಜೀಂ ಪ್ರೇಮಜೀ ಸಂಸ್ಥೆಯು ವಾಹನ ಸೌಲಭ್ಯ ಒದಗಿಸಿದೆ. ನಗರದ ಸಾರ್ವಜನಿಕರು ಮತ್ತು ಗ್ರಾಹಕರು ಪರಮೇಶ್ವರ ಎಫ್‌ಪಿಒ, ಸಿಇಒ ಮೊಬೈಲ್‌ ಸಂಖ್ಯೆ-9945682437ಕ್ಕೆ ಸಂಪರ್ಕಿಸಿ ಬೇಡಿಕೆ ಸಲ್ಲಿಸಿ ಪಡೆಯಬಹುದಾಗಿದೆ. ಕಲ್ಲಂಗಡಿ, ದ್ರಾಕ್ಷಿ, ಮೋಸಂಬಿ ಹಣ್ಣುಗಳ ಕನಿಷ್ಠ ಬೇಡಿಕೆಯು ಐದು ಕೆ.ಜಿ.ಗೆ ಮೇಲ್ಟಟ್ಟು ಸಲ್ಲಿಸಿದರೆ
ಮಾತ್ರ ಗ್ರಾಹಕರ ಮನೆ ಬಾಗಿಲಿಗೆ ಸೇವೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next