Advertisement

ನಗರ ಸೌಂದರ್ಯೀಕರಣಕ್ಕೆ ಚಾಲನೆ

11:50 AM Jan 24, 2020 | Naveen |

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆ. 5, 6 ಮತ್ತು 7ರಂದು ನಡೆಯುತ್ತಿರುವ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ನಗರವನ್ನು
ಸಿಂಗರಿಸಲಾಗುತ್ತಿದೆ ಮತ್ತು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ರಾಹುಲ್‌ ತುಕಾರಾಂ ಪಾಂಡ್ವೆ ಹೇಳಿದರು.

Advertisement

ನಗರದ ಕನ್ನಡ ಭವನದಲ್ಲಿ 85ನೇ ಅಖೀಲ ಭಾರತ ಕನ್ನಡ
ಸಾಹಿತ್ಯ ಸಮ್ಮೇಳನದ ಅಲಂಕಾರ ಸಮಿತಿಯಿಂದ ಹಮ್ಮಿಕೊಂಡಿದ್ದ ನಗರ
ಸೌಂದಯೀìಕರಣ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಗರದ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ಜಗತ್‌ ವೃತ್ತದ ವರೆಗೆ ಹಾಗೂ ಅನ್ನಪೂರ್ಣ ಕ್ರಾಸ್‌ನಿಂದ ಗುಲಬರ್ಗಾ ವಿಶ್ವವಿದ್ಯಾಲಯ, ಕೇಂದ್ರ ಬಸ್‌ ನಿಲ್ದಾಣದಲ್ಲಿರುವ ಸರ್ಕಾರಿ ಕಟ್ಟಡಗಳ ಆವರಣ ಗೋಡೆಗಳ ಮೇಲೆ ಸಮ್ಮೇಳನದ ಲಾಂಛನ ಹಾಗೂ ವಿವಿಧ
ಆಕರ್ಷಕ ಚಿತ್ರಗಳನ್ನು ಬಿಡಿಸಲಾಗುತ್ತದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಪರಿಸರ ಅಭಿಯಂತರ ಮುನಾಫ್‌ ಪಟೇಲ್‌ ಮಾತನಾಡಿ, ನಗರ ಸೌಂದರ್ಯೀಕರಣಕ್ಕೆ ಖಾಸಗಿ ಸಂಸ್ಥೆಯವರಾದ ಶಿರಶಿಮೆ ಅವರು ಗೋಡೆ ಬರಹ ಬರೆಯುವ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಉಚಿತ ಸೇವೆ ನೀಡಲು ಮುಂದೆ ಬಂದಿದ್ದಾರೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ, ಅಲಂಕಾರ ಸಮಿತಿಯ ಸದಸ್ಯರು, ಮಹಾನಗರ ಪಾಲಿಕೆ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next