Advertisement

ಗಂಟಲು ಮಾದರಿ ಸಂಗ್ರಹ

11:46 AM Jun 03, 2020 | Naveen |

ಕಲಬುರಗಿ: ಅನ್ಯ ರಾಜ್ಯಗಳಿಂದ ಜಿಲ್ಲೆಗೆ ಬಂದು ಸಾಂಸ್ಥಿಕ ಕ್ವಾರಂಟೈನ್‌ ಪೂರೈಸಿ ಮನೆಗೆ ತೆರಳಿರುವ ವಲಸಿಗರಿಗೆ ಕೋವಿಡ್‌-19 ಪರೀಕ್ಷೆ ಮಾಡಬೇಕಾಗಿರುವುದರಿಂದ ಅವರ ಗಂಟಲು ದ್ರಾವಣ ಮಾದರಿ ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ತಿಳಿಸಿದ್ದಾರೆ.

Advertisement

ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ ಸಂದರ್ಭದಲ್ಲಿ ಕೋವಿಡ್ ರೋಗದ ಲಕ್ಷಣ ಇದ್ದವರಿಗೆ ಮಾತ್ರ ಗಂಟಲು ದ್ರವ ಪಡೆದು ಪರೀಕ್ಷೆ ಮಾಡಲಾಗಿದೆ. ಇದೀಗ ವಲಸೆ ಬಂದು ಸಾಂಸ್ಥಿಕ ಕ್ವಾರಂಟೈನ್‌ನಿಂದ ಮನೆಗೆ ತೆರಳಿದವರೆಲ್ಲಿರಿಗೂ ಕೋವಿಡ್ ಪರೀಕ್ಷೆ ಮಾಡಬೇಕಾದ ಅವಶ್ಯಕತೆ ಇರುತ್ತದೆ. ಹೀಗಾಗಿ ಗಂಟಲು ದ್ರಾವಣ ಮಾದರಿ ಸಂಗ್ರಹಕ್ಕೆ ಮನೆಗೆ ಬರುವ ಆರೋಗ್ಯ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡಬೇಕು ಎಂದಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಕಾರ್ಯಕ್ಕೆ ಯಾರಾದರು ಅಡ್ಡಿಪಡಿಸಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next