Advertisement

164 ಪೊಲೀಸರ ಗಂಟಲು ಮಾದರಿ ಸಂಗ್ರಹ

12:08 PM May 29, 2020 | Naveen |

ಕಲಬುರಗಿ: ಕೋವಿಡ್ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್‌ ಸಿಬ್ಬಂದಿಗೆ ಗುರುವಾರದಿಂದ ಕೋವಿಡ್ ಪತ್ತೆ ಪರೀಕ್ಷೆ ಆರಂಭಿಸಲಾಗಿದ್ದು, 164 ಪೊಲೀಸರ ಗಂಟಲು ದ್ರಾವಣ ಮಾದರಿ ಸಂಗ್ರಹಿಸಲಾಯಿತು.

Advertisement

ಮಹಾರಾಷ್ಟ್ರ, ತೆಲಂಗಾಣದ ಗಡಿಗಳಿಗೆ ಹೊಂದಿಕೊಂಡಿರುವ ಆಳಂದ ತಾಲೂಕಿನ ಖಜೂರಿ, ಹಿರೊಳ್ಳಿ ಕಮಲಾಪುರ ತಾಲೂಕಿನ ಕಿಣ್ಣಿ ಸಡಕ್‌, ಅಫಜಲಪುರ ತಾಲೂಕಿನ ಬಳೂರಗಿ, ಸೇಡಂ ತಾಲೂಕಿನ ರಿಬ್ಬನ್‌ ಪಲ್ಲಿ ಹಾಗೂ ಚಿಂಚೋಳಿ ತಾಲೂಕಿನ ಮಿರಿಯಾಣ ಬಳಿ ಆರು ಅಂತಾರಾಜ್ಯ ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಹೊರ ಭಾಗಗಳಿಂದ ಜಿಲ್ಲೆಗೆ ಬರುವವರ ಮೇಲೆ ಹದ್ದಿನ ಕಣ್ಣಿಡಲು ಪೊಲೀಸರು, ಆರೋಗ್ಯ ತಪಾಸಣೆಗೆ ಆರೋಗ್ಯ ಸಿಬ್ಬಂದಿ ನಿಯೋಜಿಸಲಾಗಿದೆ. ಗಡಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ವಾರಿಯರ್ಸ್‌ ಆಗಿ ಶ್ರಮಿಸುತ್ತಿ ದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ವಾರಿಯರ್ಸ್‌ಗೆ ಕೋವಿಡ್ ಪತ್ತೆ ಪರೀಕ್ಷೆ ಕೈಗೆತ್ತಿಕೊಳ್ಳಲಾಗಿದೆ.

ಚೆಕ್‌ಪೋಸ್ಟ್‌ಗಳಲ್ಲಿ ಕಮಲಾ ಪುರ, ಮುಧೋಳ, ಮಿರಿಯಾಣ, ಮಾದನಹಿಪ್ಪರಗಾ, ಆಳಂದ ಹಾಗೂ ಅಫಜಲಪುರ ಠಾಣೆಗಳ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ. ಗುರುವಾರ ಮಿರಿಯಾಣ ಹೊರತುಪಡಿಸಿ ಐದು ಪೊಲೀಸ್‌ ಠಾಣೆಗಳ ಸಿಬ್ಬಂದಿಯ ಮಾದರಿ ಸಂಗ್ರಹಿಸಿ ಪ್ರಾಯೋಗಾಲಯಕ್ಕೆ ರವಾನಿಸಲಾಯಿತು. ಪೊಲೀಸ್‌ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲು ಉನ್ನತ ಅಧಿಕಾರಿಗಳ ನಿರ್ದೇಶನ ಇದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next